ಹಾಸನ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ 45 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ ಎಂದು ಶಾಸಕ ಪ್ರೀತಂ ಜೆ.ಗೌಡ ಅವರು ಹೇಳಿದರು.
ಹಾಸನ ನಗರದ ಹೊರವಲಯ ದೇವೇ ಗೌಡ ನಗರ ಮತ್ತು ಕೃಷ್ಣ ನಗರಕ್ಕೆ ರಾಜ್ಯ ಹೆದ್ದಾರಿ ಗೊರೂರು ರಸ್ತೆಯಿಂದ ಸಂಪರ್ಕ ಕಲ್ಪಿಸುವ ಸುಮಾರು 2 ಕೋಟಿ ರೂ., ರಾಜಘಟ್ಟದಿಂದ ಗವೇನಹಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೊರೊನಾದಿಂದ ಇಡೀ ದೇಶವೇ ತತ್ತರಿಸಿ ಹೋಗಿದೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ತೊಂದರೆ ಮಾಡದೇ ಹಾಸನ ವಿಧಾನ ಸಭಾ ಕ್ಷೇತ್ರಕ್ಕೆ ಸುಮಾರು 45 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಯವರು ಮಂಜೂರು ಮಾಡಿದ್ದಾರೆ ಎಂದರು.
ಹಾಸನ ನಗರಸಭೆ, ಲೋಕೋಪಯೋಗಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳಿಂದ 100 ಕೋಟಿ ರೂ. ಕೋಟಿ ರೂ. ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಠಾನವಾಗುತ್ತಿವೆ ಎಂದು ತಿಳಿಸಿದರು.
ರಸ್ತೆ ಅಭಿವೃದ್ಧಿಗೆ ಕ್ರಮ: ಹಾಸನ ನಗರಕ್ಕೆ ಹೊಂದಿಕೊಂಡಂತಿರುವ ಗವೇನಹಳ್ಳಿ, ದೇವೇಗೌಡನಗರ, ಕೃಷ್ಣಾನಗರ, ತಟ್ಟೇಕೆರೆ ಮತ್ತಿತರೆ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಹಾಳಾಗಿ ಸಾರ್ವಜನಿಕರಿಗೆ ತೊಂದರೆಯಾಗು ತ್ತಿತ್ತು. ಹಾಗಾಗಿ ಈ ರಸ್ತೆಗಳನ್ನು ಕೈಗೊತ್ತಿ ಕೊಂಡಿದ್ದು, ಡಿಸೆಂಬರ್ ವೇಳೆಗೆ ಎಲ್ಲ ಕಾಮಗಾರಿ ಗಳೂ ಪೂರ್ಣಗೊಳ್ಳಲಿವೆ ಎಂದರು.
ಸಾಮಾಜಿಕ ಅಂತರ ಕಾಪಾಡಿ: ಕೊರೊನಾ ದೊಂದಿಗೆ ನಾವು ಬದುಕುಬೇಕಾವುದು ಅನಿವಾರ್ಯವಾಗಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸ್ವತ್ಛತೆ ಕಾಪಾಡಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮಾಸ್ಕ್ ಬಳಕೆ ಮಾಡುವ ಮೂಲಕ ಕೊರೋನಾ ಹರಡದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಅಮೃತ್ ಯೋಜನೆ ಪ್ರಗತಿ: ಹಾಸನ ನಗರಕ್ಕೆ ಹೇಮಾವತಿ ನದಿಯಿಂದ ಕುಡಿಯುವ ನೀರು ಪೂರೈಸುವ ಅಮೃತ್ ಯೋಜನೆಯಡಿ ಪೈಪ್‌ಲೈನ್ ಅಳವಡಿ ಸುವ ಕಾಮಗಾರಿಗಳು ಪ್ರಗತಿಯಲ್ಲಿದೆ. ಡಿಸೆಂಬರ್ ಒಳಗೆ ಕಾಮಗಾರಿ ಪೂರ್ಣ ಗೊಂಡು ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.