ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿ ರೇಸ್ ನಲ್ಲಿ ಈಗಾಗಲೇ ಮೂರು- ನಾಲ್ಕು ಜನರ ಹೆಸರು ಕೇಳಿಬರುತ್ತಿದ್ದು, ‘ಇವರ್ ಬಿಟ್ಟು ಅವರ್ ಬಿಟ್ಟು ಮತ್ಯಾರು’ ಎಂಬ ಪರಿಸ್ಥಿತಿಗೆ ಬಂದಿದೆ.
ಇದರ ನಡುವೆ ಇಂದು (ಜು.27) ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಇದನ್ನೂ ಓದಿ:ಒಂದು ಪೆಗಾಸಸ್ ಸ್ಪೈವೇರ್ ಬೆಲೆ ಎಷ್ಟು ? ಇದು ಸರ್ಕಾರದ ಬೇಹುಗಾರಿಕೆಯ ರಹಸ್ಯ ಅಸ್ತ್ರ!
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ ಅವರು ಇಂದು ರಾಜ್ಯಕ್ಕೆ ಆಗಮಿಸಿಲಿದ್ದಾರೆ. ಶಾಸಕಾಂಗ ಸಭೆಯು ಇಂದು ಸಂಜೆಯೇ ನಡೆಯುವ ಕಾರಣ ಇಂದೇ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಳವಾಗಿದೆ.