Advertisement
ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಅಕಾರ್ ಬಂದ್ ತಾಳೆಹೊಂದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆ, ಬರ, ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ, ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಮುಂಜಾಗ್ರತೆ ಕ್ರಮ, ಎ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮ ವಹಿಸಬೇಕು ಎಂದು ಸೂಚಿಸಿದರು.
Related Articles
Advertisement
ಈಗಾಗಲೇ ಈ ಭಾಗದಲ್ಲಿ ಹಕ್ಕುಪತ್ರಗಳನ್ನು ನೀಡಲಾಗಿದೆ. ಪಿಂಚಣಿ ಅದಾಲತ್ ಮಾಡಲಾಗಿದೆ. ಎಲ್ಲಾ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಜನರಿಗೆ ಮನದಟ್ಟು ಮಾಡುವಂತದ್ದು. ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುವುದು ಎಂದರು. ಬೆಟ್ಟೇನಹಳ್ಳಿ ಗ್ರಾಮದ ನಿವಾಸಿ ಮುನಿರತ್ನ ಮಾತ ನಾಡಿ, ಬೆಟ್ಟೇನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಕಳೆದ ಮೂರ್‍ನಾಲ್ಕು ಬಾರಿ ಗ್ರಾಪಂ ಮತ್ತು ವಿಶ್ವನಾಥಪುರ ಪೊಲೀಸರಿಗೆ ಮನವಿ ಮಾಡಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ. ಮನೆ ಮತ್ತು ಅಂಗಡಿಗಳಲ್ಲಿ ಮದ್ಯ ಮಾರಾಟ ಆಗುತ್ತಿದೆ.
ಅನೇಕ ಕುಟುಂಬಗಳು ಬೀದಿ ಪಾಲಾಗುತ್ತಿದೆ. ಕೂಡಲೇ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು. ದೊಡ್ಡಬಳ್ಳಾಪುರ ಡಿವೈಎಸ್‌ಪಿ ರಂಗಪ್ಪ ಮಾತನಾಡಿ, ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಜನರು ನಿರ್ಭಿತಿಯಿಂದ ಸಲ್ಲಿಸಬೇಕು, ಅವುಗಳನ್ನು ಪರಿಶೀಲನೆ ಮಾಡಿ, ಬಾಧಿತರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ಇಲಾಖೆ ಮಾಡಲಿದೆ ಎಂದು ಹೇಳಿದರು. ಗ್ರಾಪಂ ಅಧ್ಯಕ್ಷ ದೀಪ್ತಿ ವಿಜಯಕುಮಾರ್ ಮಾತ ನಾಡಿ, ಗ್ರಾಪಂ ವ್ಯಾಪ್ರಿಯಲ್ಲಿ ಬರುವಂತಹ ಎಲ್ಲಾ ಸ್ಮಶಾನ ಜಾಗಗಳನ್ನು ತಕ್ಷಣ ಸರ್ವೆ ಮಾಡಿಕೊಡಬೇಕು. ಸುಮಾರು ದಿನಗಳಿಂದ ಪ್ರತಿ ಗ್ರಾಮದಲ್ಲಿ ಸ್ಮಶಾನವನ್ನು ಗುರ್ತಿಸಿಕೊಡಬೇಕು.
ಪ್ರತಿ ಜನರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿ ಸಬೇಕು ಎಂದು ಹೇಳಿದರು. ತಾಪಂ ಇಒ ಎಚ್.ಡಿ.ವಸಂತ್ ಕುಮಾರ್ ಮಾತ ನಾಡಿ, ಗ್ರಾಪಂಗಳಲ್ಲಿ ಸಿಗಬೇಕಾಗಿರುವ ಸೌಲಭ್ಯಗಳಲ್ಲಿ ಲೋಪದೋಷವಾಗಿದ್ದರೆ, ನೇರವಾಗಿ ದೂರು ಕೊಡಿ, ಸೌಲಭ್ಯಗಳು ಸಿಗದಿದ್ದಲ್ಲಿ ಅವುಗಳನ್ನು ತಲುಪಿಸುವಂತಹ ಕಾರ್ಯ ಮಾಡಲಾಗುತ್ತದೆ ಎಂದರು.
ಇದನ್ನೂ ಓದಿ:- ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ
ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಬೆಸ್ಕಾಂ, ಮೀನುಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಸಿಗುವಂತಹ ಸೌಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ವೃದ್ಧರಿಗೆ ಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಿದರು. ಆರೋಗ್ಯ ಇಲಾಖೆಯಿಂದ ರಕ್ತದೊತ್ತಡ, ಮಧುಮೇಹ ತಪಾಸಣೆ ಮಾಡಿದರು.
ಶ್ರೀರಾಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರಾಪಂ ಉಪಾಧ್ಯಕ್ಷ ಬಾಲಸುಬ್ರಮಣ್ಯ, ಗ್ರಾಪಂ ಪಿಡಿಒ ಉಷಾ, ಉಪತಹಶೀಲ್ದಾರ್ ಚೈತ್ರಾ, ರಾಜಸ್ವ ನಿರೀಕ್ಷಕ ಚಿದಾನಂದ, ಗ್ರಾಪಂ ಮಾಜಿ ಅಧ್ಯಕ್ಷ ಶ್ರೀರಾಮಪ್ಪ, ತಾಲೂಕು ಸೊಸೈಟಿ ನಿರ್ದೇಶಕ ಕಾಮೇನಹಳ್ಳಿ ರಮೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಆರ್. ಮುನೇಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ ಹಾಗೂ ಗ್ರಾಪಂ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.