ಮೈಸೂರು: ಪಿಎಸ್ ಐ ನೇಮಕಾತಿ ಅಕ್ರಮ ಹಗರಣದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸರ್ಕಾರ ಸರಿಯಾಗಿ ತನಿಖೆ ಮಾಡಬೇಕು. ಕೇವಲ ಕಲಬುರಗಿ ವ್ಯಾಪ್ತಿಗೆ ಮಾತ್ರ ತನಿಖೆ ಸೀಮಿತ ಆಗಬಾರದು. ಪಿಎಸ್ಐ ಹಗರಣದಲ್ಲಿ ಶಾಸಕಾಂಗ ಮತ್ತು ಕಾರ್ಯಾಂಗ ಶಾಮೀಲು ಆಗಿದೆ. ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಈ ಹಗರಣದಲ್ಲಿ ಇದ್ದಾರೆ. ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಇದನ್ನೂ ಓದಿ:ಹೈದರಾಬಾದ್: ರಾಹುಲ್ ಗಾಂಧಿ ಕ್ಯಾಂಪಸ್ ಭೇಟಿಗೆ ಅನುಮತಿ ನಿರಾಕರಿಸಿದ ಉಸ್ಮಾನಿಯಾ ವಿವಿ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಫ್ಟ್ ಆಗಿ ಆಡಳಿತ ಮಾಡುತ್ತಿದ್ದೇನೆ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಒಬ್ಬ ಮುಖ್ಯಮಂತ್ರಿ ನೀಡುವ ಹೇಳಿಕೆಯಲ್ಲ. ಆಡಳಿತದಲ್ಲಿ ಸಾಫ್ಟ್ ಅಥವಾ ಹಾರ್ಡ್ ಅಂತೇನಿಲ್ಲ. ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸಬೇಕಷ್ಟೇ. ನಿಮ್ಮ ಹಾರ್ಡ್ ವೆಪನನ್ನು ಹಗರಣ ಮಾಡಿದವರ ಮೇಲೆ ಬಳಸಿ. ಶಾಂತಿ ಕದಡುವ ಆರ್ ಎಸ್ಎಸ್, ಬಜರಂಗದಳದವರ ಮೇಲೆ ಬಳಸಿ. ಸರ್ಕಾರಕ್ಕೆ ಪ್ರತಿದಿನ ಕೆಟ್ಟ ಹೆಸರು ಬರುತ್ತಿದೆ. ಪ್ರತಿದಿನ ಒಂದಲ್ಲ ಒಂದು ಹಗರಣ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಕಿಡಿಕಾರಿದರು.
ಹೊಸ ಮುಖಕ್ಕೆ ಮಣೆ ಹಾಕುತ್ತೇವೆಂಬ ಬಿ.ಎಲ್. ಸಂತೋಷ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಂತೋಷ್ ಅವರು ಸರಿಯಾಗಿಯೇ ಹೇಳಿದ್ದಾರೆ. ನಾಗ್ಪುರ ಕಾರ್ಯಕ್ರಮದಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಬೇಕೆಂದು ಮೋದಿ ಹೇಳಿದರು. ಅದನ್ನು ಈಗ ಸ್ಟಾರ್ಟ್ ಮಾಡಬೇಕೆಂದು ಹೇಳಿದರು.