Advertisement
ಮಲೆನಾಡು ಭಾಗದಲ್ಲಿ ಆನೆ ದಾಳಿ, ಹಳೇ ಮೈಸೂರು ಭಾಗದಲ್ಲಿ ಚಿರತೆ, ಕೊಡಗು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಹುಲಿ ದಾಳಿ ಜನರನ್ನು ಬೆಚ್ಚಿ ಬೀಳಿಸಿದೆ. ರಾಜ್ಯ ಸರಕಾರ ಪ್ರತೀ ಬಾರಿ ಪ್ರಕರಣ ಆದಾಗಲೂ ಮಾನವ -ಪ್ರಾಣಿ ಸಂಘರ್ಷ ತಡೆಯಲು ಒಂದಷ್ಟು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿ ಪರಿಹಾರ ಘೋಷಿಸುತ್ತಿದೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಇಲ್ಲದಂತಾಗಿದೆ.
Related Articles
ಪ್ರಾಣಿ ಮತ್ತು ಮಾವನ ಸಂಘರ್ಷ ಪ್ರಕರಣಗಳಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳ ಸ್ಥಿತಿಯೂ ತುಂಬಾ ಶೋಚನೀಯ ಸ್ಥಿತಿಯಲ್ಲಿದೆ. ಇತ್ತೀಚೆಗೆ ಕಂದಾಯ ಸಚಿವರು ಹಟ್ಟಿಯಲ್ಲಿ ವಾಸ್ತವ್ಯ ಹೂಡಲು ಹೋಗಿದ್ದಾಗ ಅವರ ಮುಂದೆ ಆನೆ ತುಳಿತಕ್ಕೆ ಒಳಗಾದ ಕುಟುಂಬ ನೋವು ತೋಡಿಕೊಂಡಿತ್ತು.ಇದೇ ರೀತಿ ಮಲೆನಾಡು ಭಾಗದಲ್ಲಿ ಆನೆ ದಾಳಿಯಿಂದ ಸಾಕಷ್ಟು ಪ್ರಾಣ ಹಾನಿ, ಬೆಳೆ ನಷ್ಟ ಆಗಿದೆ.
Advertisement
ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ಚಿರತೆ ಹಾವಳಿಯೂ ದೊಡ್ಡ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಭಯ ಉಂಟು ಮಾಡಿತ್ತು. ರಾಜಧಾನಿ ಬೆಂಗಳೂರಿನ ಕೋಡಿಪಾಳ್ಯ, ತುರಹಳ್ಳಿ ಅರಣ್ಯ ಭಾಗದಲ್ಲೂ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಉಂಟು ಮಾಡಿತ್ತು.
ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಇತ್ತೀಚೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲೂ ವನ್ಯ ಜೀವಿ ತಜ್ಞರು ಹಲವು ಸಲಹೆ ನೀಡಿದ್ದಾರೆ. ಯಾಕಾಗಿ ಪ್ರಾಣಿಗಳು ನಾಡಿನತ್ತ ಬರುತ್ತಿವೆ, ತಡೆಯಲು ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಿದ್ದಾರೆ.ಇದೆಲ್ಲ ಪರಿಗಣಿಸಿ ರಾಜ್ಯ ಸರಕಾರ ಪ್ರಾಣಿಗಳ ಹಾವಳಿ ನಿಯಂತ್ರಣ ವಿಚಾರದಲ್ಲಿ ವೈಜ್ಞಾನಿಕ ತಳಹದಿಯ ಮೇಲೆ ಒಂದು ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲೇಬೇಕು. ಇಲ್ಲವಾದರೆ ಮತ್ತಷ್ಟು ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಗುತ್ತದೆ.