Advertisement
ಚಿರತೆ ದಾಳಿಗೆ ಇದು ನಾಲ್ಕನೇ ಸಾವಾಗಿದ್ದು, ಶುಕ್ರವಾರವಷ್ಟೇ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಎಂಬವರನ್ನು ಚಿರತೆ ಕೊಂದಿತ್ತು. ಈ ಹಿಂದೆ ಉಕ್ಕಲಗೆರೆ ಮಂಜುನಾಥ, ಎಂ. ಕೆಬ್ಬೆಹುಂಡಿಯ ಮೇಘನಾ ಎಂಬಾಕೆಯನ್ನು ಚಿರತೆ ದಾಳಿ ಮಾಡಿ ಸಾಯಿಸಿತ್ತು. ಶನಿವಾರ ರಾತ್ರಿ ಬಾಲಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.
Related Articles
Advertisement
ಚಿರತೆಯ ಹುಡುಕಾಟಕ್ಕೆ ವಿಶೇಷ ತಂಡ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅರಣ್ಯಾಧಿಕಾರಿಗಳಿಗೆ ವಿಶೇಷ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಹುಲಿ ದಾಳಿ: ವ್ಯಕ್ತಿ ಸಾವು
ಎಚ್.ಡಿ. ಕೋಟೆ: ಕಟ್ಟಿಗೆ ತರಲು ಅರಣ್ಯಕ್ಕೆ ಹೋಗಿದ್ದ ಆದಿವಾಸಿಗಗಳ ಗುಂಪಿನ ಮೇಲೆ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿತರರು ಆಶ್ಚರ್ಯಕರ ರೀತಿಯಿಂದ ಪಾರಾಗಿರುವ ಘಟನೆ ತಾಲೂಕಿನ ಬಳ್ಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬಳ್ಳೆ ಹಾಡಿಯ ಮಂಜು (18) ಮೃತಪಟ್ಟ ನತದೃಷ್ಟ.
ಚಿರತೆ ದಾಳಿ ಪ್ರಕರಣಗಳು
– 01ಅ. 31 – ಬನ್ನೂರು ಸಮೀಪದ ಮಲ್ಲಿಕಾರ್ಜುನ ಬೆಟ್ಟದಲ್ಲಿ ಕಾಲೇಜು ವಿದ್ಯಾರ್ಥಿ
– 02ಡಿ. 01 – ಬನ್ನೂರು ಬಳಿಯ ಎಂ.ಎಲ್. ಹುಂಡಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ದಾಳಿ
– 03ಜ. 20 – ತಿ.ನರಸೀಪುರ ತಾಲೂಕಿನ ಕನ್ನನಾಯಕನಹಳ್ಳಿಯಲ್ಲಿ ವೃದ್ಧೆ ಮೇಲೆ ದಾಳಿ
– 04ಜ. 21 – ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಬಾಲಕನ ಮೇಲೆ ದಾಳಿ