Advertisement

ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರ ಆತಂಕ!

10:16 PM Mar 08, 2021 | Team Udayavani |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಅರಣ್ಯ ಪ್ರದೇಶ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

Advertisement

ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕರಿಯಪ್ಪನಹಳ್ಳಿ-ತಲಕಾಯಲಬೆಟ್ಟ ಗ್ರಾಮದ ಕನ್ನಂ ಬೈರೇಶ್ವರ ಗುಡಿಯ ಸಮೀಪ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ ಚಿರತೆಯೊಂದಿಗೆ ಚಿರತೆ ಮರಿಗಳು ಸಹ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ.

ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಬೆಟ್ಟದಲ್ಲಿ ಈ ಹಿಂದೆ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರು ಆತಂಕಗೊಂಡಿದ್ದರು ಇದೀಗ ಗ್ರಾಮಸ್ಥರು ವಾಹನದಲ್ಲಿ ಹೋಗುವ ವೇಳೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತಿರಾಗಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಮತ್ತು ಅದರ ಮರಿಗಳನ್ನು ಸೆರೆಹಿಡಿಯಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ ಚಿರತೆ ಈಗಾಗಲೇ ಕರಿಯಪ್ಪನಹಳ್ಳಿ ಸುತ್ತಮುತ್ತಲು ಕುರಿ-ಮೇಕೆ ಮರಿಗಳನ್ನು ತನ್ನ ಆಹಾರ ಮಾಡಿಕೊಂಡಿದ್ದು ಮುಂದಿನ ದಿನಗಳಲ್ಲಿ ಜನರಿಗೆ ತೊಂದರೆ ಆಗುವ ಮುನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕೆಂದು ಗ್ರಾಮಸ್ಥರು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next