Advertisement

Kumta: ಬಾಡ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ… ಸ್ಥಳೀಯರ ಮೊಬೈಲ್ ನಲ್ಲಿ ಚಿರತೆ ದೃಶ್ಯ ಸೆರೆ

03:38 PM Aug 16, 2024 | Team Udayavani |

ಕುಮಟಾ: ತಾಲೂಕಿನ ಬಾಡ ಗ್ರಾಮದ ಜನತಾ ವಿದ್ಯಾಲಯದ ಹಿಂಬದಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಸ್ಥಳಿಯೋರ್ವರ ಮೊಬೈಲ್ ನಲ್ಲಿ ಚಿರತೆಯ ವಿಡಿಯೋ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

Advertisement

ಚಿರತೆ ಪ್ರತ್ಯಕ್ಷವಾಗಿರುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಗ್ರಾಮದೊಳಗೆ ಚಿರತೆ ನುಗ್ಗಿರುವುದನ್ನು ತಿಳಿದ ಬಾಡ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾಗಿರುವ ಮಂಜುನಾಥ ನಾಯ್ಕ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದಿರುವ ಕುಮಟಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚಿರತೆ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಕಳೆದ ಬಾರಿ ಕೂಡ ಬಾಡ ಗ್ರಾಮದ ಮಾದರಿ ರಸ್ತೆಯಲ್ಲಿರುವ ನಾಗರಾಜ್‌ ನಾಯ್ಕ ಎನ್ನುವವರ ಮನೆ ಒಳಗೆ ಚಿರತೆ ನುಗ್ಗಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು.ಮತ್ತೆ ಇದೀಗ ಬಾಡ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: IMF; 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಡಾ ಗೀತಾ‌ ಗೋಪಿನಾಥ್

Advertisement

Udayavani is now on Telegram. Click here to join our channel and stay updated with the latest news.

Next