ಬೆಳಗಾವಿ : ಬೆಳಗಾವಿ ನಗರದಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದ 13 ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಬೆಳಗಾವಿಯ ಜಾಧವ ನಗರದಲ್ಲಿ ಶನಿವಾರ ಚಿರತೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಚಿರತೆ ಹಿಡಿಯಲು ಕಳೆದ 2 ದಿನಗಳಿಂದಲೂ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಈವರೆಗೂ ಚಿರತೆ ಪತ್ತೆಯಾಗಿಲ್ಲ.
ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಪ್ರದೇಶದ ವ್ಯಾಪ್ತಿಯ ನಾಗರಿಕರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು ಮಕ್ಕಳನ್ನು ಹೊರಗೆ ಬಿಡದಂತೆ ತಿಳಿಸಲಾಗಿದೆ.
ಈಗ ಮುನ್ನೆಚ್ಚರಿಕೆ ಕ್ರಮವಾಗಿ ಇದೀಗ ಸುತ್ತಲಿನ ೧೧ ಖಾಸಗಿ ಶಾಲೆಗಳಿಗೆ ಹಾಗೂ ಬೆಳಗಾವಿ ಗ್ರಾಮೀಣ ಭಾಗದ ಒಂಬತ್ತು ಸರಕಾರಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಬಸವಾರಾಜ ನಾಲತವಾಡ ಮತ್ತು ನಗರ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಆದೇಶ ಹೊರಡಿಸಿದ್ದಾರೆ.
ಹನುಮಾನ್ ನಗರ ಹಿರಿಯ ಪ್ರಾಥಮಿಕ ಶಾಲೆ, ಕುವೆಂಪು ನಗರ ಕಿರಿಯ ಪ್ರಾಥಮಿಕ ಶಾಲೆ, ಸಹ್ಯಾದ್ರಿ ನಗರ ಕಿರಿಯ ಪ್ರಾಥಮಿಕ ಶಾಲೆ, ಸದಾಶಿವನಗರ ಕಿರಿಯ ಪ್ರಾಥಮಿಕ ಶಾಲೆ, ಸದಾಶಿವನಗರ ಮರಾಠಿ ಕಿರಿಯ ಪ್ರಾಥಮಿಕ ಶಾಲೆ, ವಿವಿ ನಗರ ಹಿರಿಯ ಪ್ರಾಥಮಿಕ ಶಾಲೆ, ಕುವೆಂಪುನಗರ ಕೆಎಲ್ಇ ಇಂಟರ್ ನ್ಯಾಶನಲ್ ಸ್ಕೂಲ್, ವನಿತಾ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಕ್ಲಬ್ ರಸ್ತೆ, ಕೇಂದ್ರೀಯ ವಿದ್ಯಾಲಯ, ಕ್ಯಾಂಪ್, ಮರಾಠಿ ವಿದ್ಯಾನಿಕೇತನ, ಕ್ಯಾಂಪ್, ಎನ್ ಪಿ ಇಟಿ ಕ್ಲಬ್ ರಸ್ತೆ ಸೇಂಟ್ ಝೇವಿಯರ್ ಹೈಸ್ಕೂಲ್ ಕ್ಯಾಂಪ್, ಟಿವಿ ಸೆಂಟರ್ ಜಿಎಲ್ ಪಿಎಸ್ ಉರ್ದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ : “ತೇಜಸ್’ ಲಘು ಯುದ್ಧ ವಿಮಾನ ಚಲಾಯಿಸಿದ ವಾಯುಪಡೆ ಮುಖ್ಯಸ್ಥ ಚೌಧರಿ