Advertisement

ಮಂಗಳೂರು: ಮರೋಳಿಯಲ್ಲಿ ಚಿರತೆ ಪ್ರತ್ಯಕ್ಷ?

11:58 AM Oct 04, 2021 | Team Udayavani |

ಮಂಗಳೂರು: ನಗರದ ಮರೋಳಿಯಲ್ಲಿ ರವಿವಾರ ಸಂಜೆ ಚಿರತೆಯೊಂದು ಕಂಡು ಬಂದಿದೆ ಎನ್ನಲಾಗಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

Advertisement

ಸಂಜೆ ವೇಳೆ ಮರೋಳಿಯಲ್ಲಿ ಮಕ್ಕಳು ಆಟ ಆಡುತ್ತಿದ್ದಾಗ ಚಿರತೆಯನ್ನು ಹೋಲುವ ಪ್ರಾಣಿಯೊಂದನ್ನು ದೂರದಿಂದ ನೋಡಿದ್ದಾರೆ. ಆ ವೇಳೆ ಕತ್ತಲಾಗುತ್ತ ಬಂದಿದ್ದರಿಂದ ಅಸ್ಪಷ್ಟವಾಗಿ ಗೋಚರವಾಗಿತ್ತು. ಮೊಬೈಲ್ ಫೋನಿನಲ್ಲಿ ಜನರು ಫೋಟೋ ತೆಗೆದಿದ್ದು, ಫೋಟೋದಲ್ಲಿ  ಕೂಡಾ ಸರಿಯಾಗಿ ಕಾಣಿಸುತ್ತಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೋಮವಾರ ಬೆಳಗ್ಗೆ ಪುನಃ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸುತಿದ್ದಾರೆ. ಅದು ಚಿರತೆಯೇ ಇರಬಹುದು ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಪೈ ಅವರು ಅಭಿಪ್ರಾಯ ಪಟ್ಟಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next