Advertisement

ಚಿರತೆ ಹಾವಳಿ: ಅಂಜನಾದ್ರಿಗೆ ಸಾರ್ವಜನಿಕರ ಸಂದರ್ಶನ ಸಮಯ ಬದಲಾವಣೆ

09:26 PM Aug 29, 2022 | Team Udayavani |

ಗಂಗಾವತಿ :ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭೇಟಿ ನೀಡುವ ಸಮಯವನ್ನು ಬದಲಾಯಿಸಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ .

Advertisement

ಇತ್ತೀಚೆಗೆ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿ ಸಾರ್ವಜನಿಕರು ಮೊಬೈಲ್ ಮೂಲಕ ಸೆಲ್ಫಿ ತೆಗೆದುಕೊಳ್ಳುವೇಳೆ ಫೋಟೋದಲ್ಲಿ ಚಿರತೆ ಚಲನವಲನದ ಬಗ್ಗೆ ಚಿತ್ರ ಸೆರೆಯಾಗಿತ್ತು .ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಯು ನಾಗರಾಜ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಂಜನಾದ್ರಿಯ ದೇವಸ್ಥಾನಕ್ಕೆ ಸಾರ್ವಜನಿಕರು ಪ್ರತಿನಿತ್ಯ ಬೆಳಿಗ್ಗೆ 8 ಯಿಂದ ಮಧ್ಯಾಹ್ನ 3 ವರೆಗೆ ಮಾತ್ರ ಸಂದರ್ಶನ ಮಾಡಬಹುದಾಗಿದೆ ಉಳಿದ ಸಮಯದಲ್ಲಿ ಸಾರ್ವಜನಿಕರು ಬೆಟ್ಟ ಹತ್ತುವುದನ್ನು ನಿರ್ಬಂಧಿಸಲಾಗಿದೆ ಎಂದು ಆದೇಶದ ಪ್ರತಿಯಲ್ಲಿ ತಹಶೀಲ್ದಾರ್ ಯು.ನಾಗರಾಜ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next