Advertisement

Mysore: ಬೋನಿಗೆ ಬಿದ್ದ ತಾಯಿ ಚಿರತೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

10:45 AM Dec 08, 2023 | Team Udayavani |

ಮೈಸೂರು: ಚಿರತೆ ಸೆರೆ ಹಿಡಿಯಲು ಇಟ್ಟ ಬೋನಿಗೆ ತಾಯಿ ಚಿರತೆ ಬಿದ್ದು ಆಯರಹಳ್ಳಿ ಗ್ರಾಮದ ಜನರು ನಿಟ್ಟುಸಿರು ಬಿಡುವಂತಾಗಿದೆ.

Advertisement

ಕೆಲ ದಿನಗಳ ಹಿಂದೆ ಮೈಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮಸ್ಥರು ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿತ್ತು. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆ ಮರಿಯನ್ನು ರಕ್ಷಿಸಿ ತಾಯಿ ಚಿರತೆ ಸೆರೆಗೆ ಬೋನ್ ಇಟ್ಟಿದ್ದರು ಅದರಂತೆ ಗುರುವಾರ ರಾತ್ರಿ ಮರಿಗಳನ್ನು ಹುಡುಕಿಕೊಂಡು ಬಂದ ಚಿರತೆ ಅರಣ್ಯ ಅಧಿಕಾರಿಗಳು ಇಟ್ಟ ಬೋನ್ ನಲ್ಲಿ ಬಂಧಿಯಾಗಿದೆ.

ಈ ಕುರಿತುಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆಯನ್ನು ರಕ್ಷಣೆ ಮಾಡಿದ್ದಾರೆ. ಇದರೊಂದಿಗೆ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: Hospitalised: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next