ಕುಂದಾಪುರ : ಆಹಾರ ಅರಸಿಕೊಂಡು ನಾಡಿಗೆ ಬಂದ ಹೆಣ್ಣು ಚಿರತೆಯೊಂದು ಸೌಕೂರು ಸಮೀಪದ ಬಾವಿಗೆ ಬಿದ್ದಿದ್ದು ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಚಿರತೆಯನ್ನು ರಕ್ಷಿಸಿದ ಘಟನೆ ಶುಕ್ರವಾರ ನಡೆದಿದೆ.
ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪದ ಅಶೋಕ ದೇವಾಡಿಗ ಎನ್ನುವವರ ಮನೆಯ 30 ಅಡಿ ಆಳದ ಬಾವಿಗೆ ಚಿರತೆಯೊಂದು ಬಿದ್ದಿದ್ದು ಇದನ್ನು ಕಂಡ ಮನೆಯವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರದಿಂದ ಹಗ್ಗ ಹಾಗೂ ಬುಟ್ಟಿಯನ್ನು ಬಳಸಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಿದ್ದಾರೆ.
ಚಿರತೆಗೆ 2 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ವಲಯಾರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಉಪ ವಲಯಾರಣ್ಯಾಧಿಕಾರಿಗಳಾದ ಶರತ್ ಹಾಗೂ ಉದಯ್ ಮಾರ್ಗದರ್ಶನದಲ್ಲಿ ಸ್ಥಳೀಯರ ಸಹಕಾರದಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ :ಅಮೆರಿಕದಲ್ಲಿ ಭಾರತ ಮೂಲದ ದಂಪತಿ ಹತ್ಯೆ : ಅನಾಥವಾಗಿ ಅಳುತ್ತಿದ್ದ ನಾಲ್ಕು ವರ್ಷದ ಮಗು