ಚಿಕ್ಕಮಗಳೂರು: ಚಿರತೆಯೊಂದು ತಂತಿ ಬೇಲಿಯಲ್ಲಿ ಸಿಲುಕಿ ಹೊರಬರಲಾಗದೆ ಒದ್ದಾಡುತ್ತಿರುವ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಎಂಬಲ್ಲಿ ಕಂಡುಬಂದಿದೆ.
ಆಹಾರ ಅರಸಿಕೊಂಡು ಬಂದ ವೇಳೆ ತೋಟಕ್ಕೆ ಹಾಕಿದ ಬೇಲಿಗೆ ಸಿಲುಕಿಕೊಂಡು ಹೊರಬರಲಾಗದೆ ಒದ್ದಾಡುತ್ತಿದೆ ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡ ಚಿರತೆ ಮತ್ತೆ ಉದ್ರೇಕಕ್ಕೆ ಒಳಗಾಗಿದೆ, ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಶಿವಮೊಗ್ಗದಲ್ಲಿರುವ ಅರಿವಳಿಕೆ ತಜ್ಞರಿಗೆ ಕರೆ ಮಾಡಿದ್ದಾರೆ ಇನ್ನು ಅವರು ಬಂದ ಬಳಿಕ ಅರಿವಳಿಕೆ ನೀಡಿ ಚಿರತೆಯನ್ನು ಸೆರೆ ಹಿಡಿಯಬೇಕಾಗಿದೆ.
ಚಿರತೆಯ ಒದ್ದಾಟಕ್ಕೆ ತಂತಿ ಬೇಲಿ ಚಿರತೆಯ ಹೊಟ್ಟೆಯನ್ನ ಸೀಳಿಕೊಂಡಿದೆ.
ಇದನ್ನೂ ಓದಿ: ವರುಣಾರ್ಭಟ: 145ಕ್ಕೂ ಹೆಚ್ಚು ಮಂದಿ ಮೃತ್ಯು, ಉತ್ತರಾಖಂಡ, ಹರಿಯಾಣದಲ್ಲಿ ಭಾರೀ ಮಳೆ ಎಚ್ಚರಿಕೆ