ಲಕ್ನೋ: ಪರಸ್ಪರ ಪ್ರೀತಿಸುತ್ತಿದ್ದ ಸಲಿಂಗಿ ಜೋಡಿ ಸಾಂಪ್ರದಾಯಿಕವಾಗಿ ದೇವಸ್ಥಾನದಲ್ಲಿ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ.
ಪಶ್ಚಿಮ ಬಂಗಾಳದ ಮೂಲದ ಜಯಶ್ರೀ ರಾಹುಲ್ (28) ಮತ್ತು ರಾಖಿ ದಾಸ್ (23) ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ.
ದಕ್ಷಿಣ 24 ಪರಗಣ ಜಿಲ್ಲೆಯವರಾದ ಜಯಶ್ರೀ ರಾಹುಲ್ ಹಾಗೂ ರಾಖಿ ದಾಸ್ ಡಿಯೋರಿಯಾದಲ್ಲಿ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರೀತಿ ಹುಟ್ಟಿತ್ತು.
ಕೆಲವು ದಿನಗಳ ಹಿಂದೆ ದೀರ್ಗೇಶ್ವರನಾಥ ದೇವಸ್ಥಾನದಲ್ಲಿ ಮದುವೆಗೆ ಅನುಮತಿಯನ್ನು ಕೋರಲಾಗಿತ್ತು. ಆದರೆ ದೇವಸ್ಥಾನದಲ್ಲಿ ಅನುಮತಿ ನಿರಾಕರಿಸಿದ್ದರು. ಇದಾದ ಬಳಿಕ ಆರ್ಕೆಸ್ಟ್ರಾ ತಂಡದ ಮಾಲೀಕ ಮನ್ನಾ ಪಾಲ್ ಮದುವೆಗೆ ನೋಟರೈಸ್ ಮಾಡಿದ ಅಫಿಡವಿಟ್ ಪಡೆದುಕೊಂಡಿದ್ದಾರೆ.
ನೋಟರಿ ಪ್ರಮಾಣ ಪತ್ರವನ್ನು ಪಡೆದುಕೊಂಡ ನಂತರ ಸೋಮವಾರ(ಜ.8 ರಂದು) ಡಿಯೋರಿಯಾದ ಭಟ್ಪರ್ ರಾಣಿಯ ಭಗದಾ ಭವಾನಿ ದೇವಸ್ಥಾನದಲ್ಲಿ ತನ್ನ ಆತ್ಮೀಯರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.