Advertisement
ಪೊಲೀಸ್ ಪೇದೆಗಳ ಆಯ್ಕೆ ಹಾಗೂ ಎಸ್‌ಪಿ ಕಚೇರಿ ಸ್ಥಳಾಂತರ ಕುರಿತು ಬಿಜೆಪಿ ಸದಸ್ಯ ಸಂಜೀವ ಮಠಂದೂರ್ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸ್ ಪೇದೆಗಳ ನೇಮಕಾತಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ 3.60 ಲಕ್ಷ ಅರ್ಜಿ ಸಲ್ಲಿಕೆಯಾಗಿದೆ. ಇದರಲ್ಲಿ ಕರಾವಳಿ ಜಿಲ್ಲೆಗಳ ಪಾಲು ಅತ್ಯಂತ ಕಡಿಮೆಯಾಗಿದೆ.
ಸ್ಥಳೀಯ ಯುವಜನತೆಗೆ ನೇಮಕಾತಿಯಲ್ಲಿ ಆದ್ಯತೆ ನೀಡಲು ಕೃಪಾಂಕ ಕೊಡುವ ಬಗ್ಗೆಯೂ ಚಿಂತನೆ ನಡೆಸಬೇಕು. ಜತೆಗೆ ಪೊಲೀಸ್ ಅಧೀಕ್ಷಕರ ಕಚೇರಿಯು ಗ್ರಾಮೀಣ ಭಾಗದಿಂದ ನೂರು ಕಿ.ಮೀಗೂ ದೂರವಿದೆ. ಇದರಿಂದ ಗ್ರಾಮೀಣ ಜನರಿಗೆ ತೊಂದರೆಯಾಗುತ್ತದೆ. ಇದನ್ನು ತಪ್ಪಿಸಲು ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಬೇಕು ಎಂದು ಸಂಜೀವ ಮಠಂದೂರು ಮನವಿ ಮಾಡಿದರು.
Related Articles
Advertisement
ಪರಿಶೀಲಿಸಿ ಕ್ರಮದ.ಕ. ಜಿಲ್ಲಾ ಕೇಂದ್ರದಲ್ಲಿರುವ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಿದ್ದೇವೆ. ಎಸ್‌ಪಿ ಕಚೇರಿ ಜತೆಗೆ ಡಿಆರ್ ಕೂಡ ಸ್ಥಳಾಂತರ ಮಾಡಬೇಕಾಗುತ್ತದೆ. ಹೀಗಾಗಿ ತತ್‌ಕ್ಷಣ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.