Advertisement
ಜುಲೈ ತಿಂಗಳಿನಲ್ಲಿ ಮಂಗಳೂರು ತಾಲೂಕಿನಲ್ಲಿ 1101.0 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. 840.4 ಮಿ.ಮೀ. ಮಳೆಯಾಗಿದೆ. ಅದೇರೀತಿ ಬಂಟ್ವಾಳ ತಾಲೂಕಿನಲ್ಲಿ 1203.0 ವಾಡಿಕೆ ಮಳೆಯಾಗಬೇಕಿತ್ತು. ಆದರೆ 1104.0 ಮಿ.ಮೀ. ಮಾತ್ರ ಮಳೆಯಾಗಿದೆ. ಒಟ್ಟಾರೆ ದ.ಕ. ಜಿಲ್ಲೆಯಲ್ಲಿ 1,217.0 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,249.0 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಕೊಂಚ ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 1381.3 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,211.1 ಮಿ.ಮೀ. ಸರಾಸರಿ ಮಳೆಯಾಗಿದೆ.
ಜೂನ್ ತಿಂಗಳಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 977 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,397.0 ಮಿ.ಮೀ, ಮಳೆಯಾಗಿದೆ. ಮಂಗಳೂರು ತಾಲೂಕಿನಲ್ಲಿ 980.0 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 1195.0 ಮಿ.ಮೀ. ಮಳೆಯಾಗಿದೆ. ಪುತ್ತೂರು ತಾಲೂಕಿನಲ್ಲಿ 959 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1186.2 ಮಿ.ಮೀ. ಮಳೆಯಾಗಿದೆ. ಬಂಟ್ವಾಳ ತಾಲೂಕಿನಲ್ಲಿ 990 ವಾಡಿಕೆ ಮಳೆಯಾಗಬೇಕು. ಆದರೆ 1,298.4 ಮಿ.ಮೀ. ಮಳೆಯಾಗಿದೆ. ಸುಳ್ಯ ತಾಲೂಕಿನಲ್ಲಿ 803 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,223.6 ಮಿ.ಮೀ., ಮಳೆಯಾಗಿದೆ. ಇದರೊಂದಿಗೆ ಜೂನ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ನಾಲ್ಕು ವರ್ಷ ವಾಡಿಕೆಗಿಂತ ಕಡಿಮೆ ಮಳೆ
ಹವಾಮಾನ ಇಲಾಖೆಯ ಅಂಕಿ-ಅಂಶ ಅವಲೋಕಿಸಿದರೆ, ಕರಾವಳಿ ಪ್ರದೇಶದಲ್ಲಿ 2013ರಿಂದ 2017ರ ಅವಧಿಯಲ್ಲಿ 2013 ಹೊರತುಪಡಿಸಿ ಉಳಿದ ನಾಲ್ಕು ಮಳೆಗಾಲದಲ್ಲಿಯೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಸಾಮಾನ್ಯವಾಗಿ ಮುಂಗಾರು ಋತುವಿನಲ್ಲಿ ಕರಾವಳಿ ಪ್ರದೇಶದಲ್ಲಿ 3,019 ಮಿ.ಮೀ. ವಾಡಿಕೆ ಮಳೆಯಾಗಬೇಕು. 2013ರಲ್ಲಿ 3206 ಮಿ.ಮೀ. ಮಳೆಯಾಗಿತ್ತು. ಆದರೆ 2014ರಲ್ಲಿ 2087 ಮಿ.ಮೀ. ಮಳೆಯಾಗಿದ್ದು, 2015ರಲ್ಲಿ 2,241 ಮಿ.ಮೀ. ಮಳೆಯಾಗಿದೆ. ಹಾಗೆಯೇ 2016ರಲ್ಲಿ 2,403 ಮಿ.ಮೀ. ಮಳೆಯಾಗಿದ್ದು ಮತ್ತು 2017ರಲ್ಲಿ 2579 ಮಿ.ಮೀ. ಮಳೆಯಾಗಿದೆ.
Related Articles
ಕರಾವಳಿ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಪ್ರಮಾಣ ಇಳಿಕೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂಗಾರು ಸ್ವಲ್ಪ ಪ್ರಮಾಣದಲ್ಲಿ ಕ್ಷೀಣಿಸಿತ್ತು. ಮುಂದಿನ ಎರಡು ದಿನಗಳಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
– ಶ್ರೀನಿವಾಸ ರೆಡ್ಡಿ,ರಾಜ್ಯ ನೈಸರ್ಗಿಕ ವಿಕೋಪ
ಉಸ್ತುವಾರಿ ಕೇಂದ್ರದ ನಿರ್ದೇಶಕ
Advertisement
ವಿಶೇಷ ವರದಿ