Advertisement

ಮುಂದಿನ 20 ದಿನ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ?

10:46 PM Sep 12, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಂದಿನ 20 ದಿನ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ಲಕ್ಷಾಂತರ ಎಕರೆ ಬೆಳೆ ನಾಶವಾಗಿದೆ. ನೂರಾರು ಜನರ ಜೀವನ ಕಸಿದಿದೆ.

ಇಂತಹ ಸಮಯದಲ್ಲಿ ಮುಂಗಾರು ಮಳೆಯ ಕೊನೆಯ 20 ದಿನಗಳ ಕಾಲ ಹೇಗಿರಲಿದೆಯೋ ಎಂಬ ಚಿಂತೆಯಲ್ಲಿದ್ದ ಜನರಿಗೆ ಸಮಾಧಾನಕರ ಸಂಗತಿಯನ್ನು ಹವಾಮಾನ ಇಲಾಖೆ ತಿಳಿಸಿದೆ. ಸೆ.15ರಿಂದ 30ರ ವರೆಗೆ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಎ.ಪ್ರಸಾದ್‌ ತಿಳಿಸಿದ್ದಾರೆ.

ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಕಾರ 71 ಸೆಂ.ಮೀ. ಮಳೆಯಾಗಲಿದೆ. ಆದರೆ, ಈ ಬಾರಿ ಜೂ.1ರಿಂದ ಸೆ.7ರ ವರೆಗೆ 98 ಸೆಂ.ಮೀ. ಮಳೆಯಾಗಿದೆ. ವಾಡಿಕೆಗಿಂತ‌ ಶೇ.39ರಷ್ಟು ಹೆಚ್ಚಿನ ಮಳೆಯಾಗಿದೆ. ಆದರೆ, ಮುಂದಿನ 20 ದಿನಗಳಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಪಶ್ಚಿಮದ ಕೆಲವು ಪ್ರದೇಶಗಳನ್ನು ಹೊರತುಪಡಿಸಿದರೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next