Advertisement

ಆನ್‌ಲೈನ್‌ನಲ್ಲೇ ಪಾಠ-ಪರೀಕ್ಷೆ ಎಲ್ಲ!

02:43 PM Apr 29, 2020 | Suhan S |

ಹುಬ್ಬಳ್ಳಿ: ಇಲ್ಲಿನ ಶ್ರೀಮತಿ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್‌ನಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ನಲ್ಲಿ ಪಾಠ ಹಾಗೂ ಪರೀಕ್ಷೆ ಯಶಸ್ವಿಯಾಗಿ ಮಾಡಲಾಗುತ್ತಿದೆ.

Advertisement

ಲಾಕ್‌ಡೌನ್‌ ಜಾರಿಯಲ್ಲಿದ್ದು ವಿದ್ಯಾರ್ಥಿಗಳು ಕಾಲೇಜಿಗೆ ಬರುವ ಹಾಗಿಲ್ಲ. ಈ ನಡುವೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಕಳೆದ ನಾಲ್ಕು ವಾರಗಳಿಂದ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಆನ್‌ ಲೈನ್‌ನಲ್ಲಿ ಪಾಠಗಳನ್ನು ಮಾಡಲಾಗುತ್ತಿದೆ. ವಿದ್ಯಾಲಯದಿಂದ ಒಟ್ಟು 8 ವಿಭಾಗಗಳ 24 ತರಗತಿಗಳಲ್ಲಿ ಓದುತ್ತಿರುವ ಸುಮಾರು 1200 ವಿದ್ಯಾರ್ಥಿಗಳಲ್ಲಿ ಶೇ.90 ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ನಡೆಸುತ್ತಿರುವ ತರಗತಿಗಳಲ್ಲಿ ಸಕ್ರಿಯರಾಗಿದ್ದಾರೆ.

ಇದೀಗ ಮೂರು ತಾಸಿನ 100 ಅಂಕಗಳ ಪ್ರಶ್ನೆಪತ್ರಿಕೆಗಳನ್ನು ವಾಟ್ಸ್‌ಆ್ಯಪ್‌ ಗ್ರುಪ್‌ಗ್ಳಲ್ಲಿ ವೇಳಾಪಟ್ಟಿ ಪ್ರಕಾರ ಬಿಡುಗಡೆಗೊಳಿಸಿದ್ದು, ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ಉತ್ತರ ಬರೆಯಲಿದ್ದಾರೆ. ಇದರಿಂದ ಮುಂಬರುವ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಬರಲಿದೆ. ಈ ಕಾರ್ಯಕ್ಕೆ ಪಾಲಕರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಲಾಕ್‌ಡೌನ್‌ ಮುಕ್ತಾಯದವರೆಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಪ್ರಾಚಾರ್ಯ ವೀರೇಶ ಅಂಗಡಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next