Advertisement

ಹೊಸದಾಗಿ ಜಾತಿಗಣತಿ ನಡೆಸಲಿ: ಬಿಎಸ್‌ವೈ

10:25 PM Dec 24, 2023 | Team Udayavani |

ದಾವಣಗೆರೆ: ಜಾತಿಗಣತಿ ಸರಿಯಾಗಿ ಆಗಿಲ್ಲ ಎಂಬುದು ಎಲ್ಲರ ಅಭಿಪ್ರಾಯವಾಗಿದ್ದು, ನಾವೂ ಅದನ್ನೇ ಹೇಳುತ್ತಿದ್ದೇವೆ. ಹಾಗಾಗಿ ಸರಕಾರ ಹೊಸದಾಗಿ ಜಾತಿಗಣತಿ ನಡೆಸಿ ವಾಸ್ತವಿಕ ಅಂಶಗಳನ್ನು ತಿಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಪ್ರಧಾನಿ ಮೋದಿ, ಅಮಿತ್‌ ಶಾ, ನಡ್ಡಾ ಜತೆ ಚರ್ಚಿಸಿದ ಬಳಿಕವೇ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹೊಸಬರಿಗೆ ಹೆಚ್ಚಿನ ಜವಾಬ್ದಾರಿ ಕೊಡಲಾಗಿದೆ. ಯಾರೋ ಏನೋ ಹೇಳಿದ್ದಕ್ಕೆ ಪ್ರತಿಕ್ರಿಯಿಸಲು ಹೋಗುವುದಿಲ್ಲ. ವಿಜಯೇಂದ್ರ ಬಗೆಗಿನ ಯತ್ನಾಳ್‌ ಹೇಳಿಕೆಗೂ ಪ್ರತಿಕ್ರಿಯಿಸುವುದಿಲ್ಲ. ವರಿಷ್ಠರಿಗೆ ದೂರು ನೀಡುವ ಪ್ರಶ್ನೆಯೂ ಉದ್ಭವಿಸುವುದಿಲ್ಲ. ಮುಂದೆ ಎಲ್ಲವೂ ಸರಿ ಹೋಗಲಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next