ಮಹಾನಗರ: 5 ವರ್ಷಗಳಿಂದ ನರೇಂದ್ರ ಮೋದಿ ಸರಕಾರವು ಜನತೆಗೆ ನೀಡಿದ ಘೋಷಣೆಗಳು ಸುಳ್ಳಾಗಿವೆ. ಒಳ್ಳೆಯ ದಿನಗಳು ಈ ದೇಶದ ಜನಸಾಮಾನ್ಯರಿಗೆ ಬಂದಿ ಲ್ಲ. ಇಂತಹ ಕಾರ್ಮಿಕ ವಿರೋಧಿ ಸರಕಾರವನ್ನು ಮತ್ತೆ ಅಧಿಕಾರಕ್ಕೇರದಂತೆ ತಡೆಯಲು ಇಡೀ ದೇಶದ ಕಾರ್ಮಿಕ ವರ್ಗ ಒಂದಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಹೇಳಿದರು.
ಬಂದರು ಪ್ರದೇಶದ ಮಹಿಳಾ ಹಮಾಲಿ ಕಾರ್ಮಿಕರ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ಜೀವನಾವಶ್ಯಕ ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಏರುತ್ತಿವೆೆ. ಕಾರ್ಮಿಕರ ಪರವಾದ ಕಾನೂನುಗಳನ್ನು ಮಾಲಿಕರ ಪರವಾಗಿ ತಿದ್ದುಪಡಿ ಮಾಡಿ, ಕನಿಷ್ಠ ಕೂಲಿ, ಸಾಮಾಜಿಕ ಭದ್ರತೆ, ಪಿಂಚಣಿ ಮುಂತಾದ ಸವಲತ್ತುಗಳನ್ನು ಇನ್ನಿಲ್ಲವಾಗಿಸಲು ಪ್ರಯ ತ್ನಿಸುತ್ತಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲು ಅವರು 10 ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿಗೆ ಕಿಂಚಿತ್ತೂ ಗಮನ ನೀಡಲಿಲ್ಲ, ಬದಲಾಗಿ ಜಿಲ್ಲೆಯ ಶಾಂತಿ ನೆಮ್ಮದಿಗೆ ಭಂಗ ತರುವ ಹೇಳಿಕೆ ನೀಡಿ ಜಿಲ್ಲೆಯ ಜನತೆಯನ್ನು ತಲೆ ತಗ್ಗಿಸುವಂತೆ ಮಾಡಿದ್ದಾರೆ. ಯುವ ಜನರಿಗೆ ಉದ್ಯೋಗ ಸೃಷ್ಠಿಸುವ ಒಂದೇ ಒಂದು ಯೋಜನೆಯನ್ನು ತರಲು ಅಸಾಧ್ಯವಾದ ಸಂಸದರನ್ನು ಈ ಬಾರಿ ಮನೆಗೆ ಕಳುಹಿಸಲು ಕಾರ್ಮಿಕ ವರ್ಗ ಚಿಂತಿಸಬೇಕಿದೆ ಎಂದರು.
ಅಧ್ಯಕ್ಷತೆಯನ್ನು ಬಂದರು ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಅಹಮ್ಮದ್ ಬಾವಾ ವಹಿಸಿದ್ದರು.ಸುಲೋಚನಾ, ಕುಶಾಲಾಕ್ಷಿ, ಮುಕ್ತಾ,ಸುಶೀಲಾ,ಗಿರಿಜಾ ಮೊದಲಾದ ವರು ಉಪಸ್ಥಿತರಿದ್ದರು.