Advertisement

ಬ್ಯಾಂಕ್‌ಗಳು ಯುವ ಉದ್ಯಮಿಗಳಿಗೆ ನೆರವು ನೀಡಲಿ

03:14 PM Sep 05, 2020 | Suhan S |

ಹಾಸನ: ನೂತನವಾಗಿ ಉದ್ಯಮವನ್ನು ಪ್ರಾರಂಭಿಸುವ ಯುವಕರಿಗೆ ಪ್ರೋತ್ಸಾಹ ನೀಡುವುದು ಅತ್ಯಗತ್ಯ. ಬ್ಯಾಂಕುಗಳು ಈ ನಿಟ್ಟಿನಲ್ಲಿ ಹೆಚ್ಚಿನ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಬ್ಯಾಂಕುಗಳ ಪ್ರಾದೇಶಿಕ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಕಾರಿ, ಸರ್ಕಾರದಿಂದ ವಿವಿಧ ಇಲಾಖೆಗಳ ಮೂಲಕ ಯುವ ಉದ್ಯಮಿಗಳನ್ನು ಪ್ರೋತ್ಸಾಸಲು ಹಲವು ಯೋಜನೆಗಳನ್ನು ಜಾರಿಗೆ ತಂದರೂ ಸಹ, ಫ‌ಲಾನುಭವಿಗಳು ಅದನ್ನು ಪಡೆಯಲು ಬ್ಯಾಂಕುಗಳು ಸಹಕಾರ ನೀಡುತ್ತಿಲ್ಲ. ಬದಲಾಗಿ ವಿವಿಧ ಕಾರಣಗಳನ್ನು ತೋರಿಸಿ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿವೆ. ಇದರಿಂದ ಯುವ ಜನೆತೆಯ ಉತ್ಸಾಹ ಕಡಿಮೆಯಾಗುತ್ತದೆ. ಬ್ಯಾಂಕಿನವರು ಫ‌ಲಾನುಭವಿಗಳ ದಾಖಲಾತಿಗಳು ಸರಿಯಾಗಿದ್ದಲ್ಲಿ ಅವರಿಗೆ ಸಾಲ ಸೌಲಭ್ಯ ನೀಡುವಮೂಲಕ ಅವರ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಸಹಕರಿಸಬೇಕು ಎಂದರು.

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಟಿ. ದಿನೇಶ್‌ ಮಾತನಾಡಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಹೆಚ್ಚಿನ ಆಧ್ಯತೆಯನ್ನು ನೀಡಬೇಕಿದೆ. ಇದರಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ. ಜಿಲ್ಲೆಯು ಕೃಷಿ ಪ್ರಧಾನವಾಗಿದ್ದರೂ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿಲ್ಲ. ಹಾಗಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಸ್ಥಾಪಿಸುವವರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕಿದೆ ಎಂದರು.

ಪ್ರತಿ ವರ್ಷ ಸುಮಾರು 9 ಸಾವಿರಕ್ಕೂ ಅಧಿಕ ಪದವೀಧರರು ಉದ್ಯೋಗ ಕ್ಷೇತ್ರಕ್ಕೆ ಕಾಲಿಡುತ್ತಿದ್ದು, ಅವರಲ್ಲಿ ಕೇವಲ 2,500 ಪದವೀಧರರಿಗೆ ಮಾತ್ರ ಸ್ವಂತ ಉದ್ಯಮ ಅಥವಾ ವೇತನ ಉದ್ಯೋಗ ದೊರೆಯುತ್ತಿದೆ. ಬ್ಯಾಂಕುಗಳು ಹೊಸ ಉದ್ಯಮದಾರರಿಗೆ ಸರಿಯಾದ ಆರ್ಥಿಕ ಸಹಕಾರ ನೀಡದಿರುವುದು ಇದಕ್ಕೆ ಕಾರಣ. ಈ ಕಾರಣದಿಂದಲೇ ಯುವಜನತೆ ಹೊರರಾಜ್ಯಗಳಿಗೆ ಹೋಗಿ ಕೆಲಸ ಮಾಡಲು ಮುಂದಾಗುತ್ತಿದ್ದಾರೆ. ಹಾಗಾಗಿ ಬ್ಯಾಂಕಿನವರು ದಾಖಲಾತಿಗಳನ್ನು ಪರಿಗಣಿಸಿ ಸರ್ಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಇತರೆ ಸಾಲ ಸೌಲಭ್ಯಗಳನ್ನು ನೀಡಬೇಕು ಎಂದರು

Advertisement

Udayavani is now on Telegram. Click here to join our channel and stay updated with the latest news.

Next