Advertisement

BJP ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆಯಲಿ: ಕಾಂಗ್ರೆಸ್ ಚಾಟಿ

03:26 PM May 25, 2023 | Team Udayavani |

ಬೆಂಗಳೂರು : ”ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ.ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ.ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಗಾಯದ ಮೇಲೆ ಬರೆ ಎಳೆದಿದೆ.

Advertisement

”ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ಬಿಜೆಪಿಯವರೇ? ಅಮಿತ್ ಶಾ ಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ?ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!” ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.

ಚುನಾವಣೆಯ ಆಘಾತಕಾರಿ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಬದಲಾವಣೆಯಾಗಿಲ್ಲ, ವಿಪಕ್ಷ ನಾಯಕನ ಆಯ್ಕೆಯೂ ನಡೆದಿಲ್ಲ ಎನ್ನುವುದು ಗಮನಾರ್ಹ ವಿಚಾರವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next