Advertisement

ಚಂದ್ರೇಗೌಡ ಬೆಂಬಲಿಗರಿಗೆ ಅವಕಾಶ ನೀಡಿ

03:20 PM May 15, 2019 | Team Udayavani |

ಮಾಲೂರು: ಮೈತ್ರಿ ಧರ್ಮದ ಆಧಾರದ ಮೇಲೆ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಿರುವ ತಾಲೂಕು ಜೆಡಿಎಸ್‌ ಅಧ್ಯಕ್ಷ ಎಚ್.ವಿ.ಚಂದ್ರೇಗೌಡರ ಬೆಂಬಲಿಗರಿಗೆ ಹೊಂದಾಣಿಕೆ ಆಧಾರದ ಮೇಲೆ ಅವಕಾಶ ಕಲ್ಪಿಸುವಂತೆ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.

Advertisement

ಪಟ್ಟಣದ ಕುಂಬೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಪುರಸಭಾ ಚುನಾವಣೆ ಪೂರ್ವಸಿದ್ಧತೆಗಾಗಿ ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಕೋಮುವಾದಿ ಶಕ್ತಿಗಳನ್ನು ದೂರ ಮಾಡಲು ಜಾತ್ಯತೀಯ ಶಕ್ತಿಗಳು ಒಗ್ಗೂಡಿರುವಂತೆ ಸ್ಥಳೀಯ ಸಂಸ್ಥೆಗಳ ಪ್ರಬಲ ಚುನಾವಣೆಯಾಗಿರುವ ಪುರಸಭೆಯಲ್ಲಿಯೂ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾಗಿದೆ ಎಂದು ಹೇಳಿದರು.

27 ವಾರ್ಡ್‌ನಲ್ಲೂ ಗೆಲುವು: ಪುರಸಭೆಯ ಎಲ್ಲಾ 27 ವಾರ್ಡ್‌ಗಳಲ್ಲಿಯೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲು ಸಾಧ್ಯವಿದೆ. ವಾರ್ಡ್‌ಗೆ ಒಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಟಿಕೆಟ್ ಸಿಗದ ಆಕಾಂಕ್ಷಿಗಳು ನಿರಾಸೆಯಾಗದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದಲ್ಲಿ ಎಲ್ಲಾ 27 ವಾರ್ಡ್‌ ಗಳಲ್ಲಿಯೂ ಕಾಂಗ್ರೆಸ್‌ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಸೂಕ್ತ ತೀರ್ಮಾನ ಕೈಗೊಳ್ಳಿ: ಕಾರ್ಯಕರ್ತರು ವಿನಾಕಾರಣ ಗೊಂದಲಗಳನ್ನು ಸೃಷ್ಟಿಸಿಕೊಳ್ಳದೆ, ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವಂತೆ ಸೂಚಿಸಿದ ಸಂಸದ ಮುನಿಯಪ್ಪ, ಜೆಡಿಎಸ್‌ನ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವುದಾದರೆ ಕೆಪಿಸಿಸಿ ಅಧ್ಯಕ್ಷರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ತಾಲೂಕು ಉಸ್ತುವಾರಿಗಳಿಗೆ ಸೂಚಿಸಿದರು.

ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಸ್ಥಳೀಯ ಸಂಸ್ಥೆ ಪುರಸಭಾ ಚುನಾವಣೆ ಪಕ್ಷ ಸಂಘಟನೆ ದೃಷ್ಟಿಯಿಂದ ಪ್ರಮುಖವಾಗಿದೆ. ಪಟ್ಟಣದಲ್ಲಿಯೇ ವಾಸ್ತವ್ಯ ಮಾಡುವ ಮೂಲಕ ಪ್ರತಿವಾರ್ಡ್‌ನ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

Advertisement

ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ :ಪಟ್ಟಣದ ಎಲ್ಲಾ 27 ವಾರ್ಡ್‌ಗಳಿಂದ 100 ಮಂದಿ ಆಕಾಂಕ್ಷಿಗಳು ಅವಕಾಶ ಕೋರಿ ಮನವಿ ಸಲ್ಲಿಸಿದ್ದಾರೆ. ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರು, ಉಸ್ತುವಾರಿ ವಹಿಸಿರುವ ಪ್ರಭಾಕರ್‌ರೆಡ್ಡಿ ಅವರನ್ನು ಒಳಗೊಂಡ ಅಯ್ಕೆ ಸಮಿತಿಯು ಸೂಕ್ತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು. ಇತರೆ ಆಕಾಂಕ್ಷಿಗಳು ನಿರಾಸೆಯಾಗದೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಕಾರ್ಯ ಮಾಡಬೇಕಾಗಿದೆ. ಅವಕಾಶ ವಂಚಿತ ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ತಿಳಿಸಿದ ಅವರು, ಪಕ್ಷದ ಯಾವುದೇ ಕಾರ್ಯಕರ್ತರಿಗೂ ಅನ್ಯಾಯ ಮಾಡುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು. ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ, ಸಿ.ಲಕ್ಷ್ಮೀ ನಾರಾಯಣ್‌, ಉಸ್ತುವಾರಿ ಪ್ರಭಾಕರ್‌ರೆಡ್ಡಿ, ಸಿ.ಪಿ.ವೆಂಕಟೇಶ್‌ ಮಾತನಾಡಿದರು. ಸಿ.ರಾಜಣ್ಣ, ಟಿ.ಮುನಿಯಪ್ಪ, ಎಂ.ಜಿ.ಮಧು ಸೂದನ್‌, ವಿಧಾನ ಪರಿಷತ್‌ ಸದಸ್ಯ ನಾರಾಯಣ ಸ್ವಾಮಿ, ಸೋಮಶೇಖರ್‌, ಚುನಾವಣೆಯ ವೀಕ್ಷಕಿ ವಸಂತ ಕವಿತಾ, ಎಚ್.ಹನುಮಂತಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next