Advertisement

ಸಿಎಂ ಎಚ್‍ಡಿಕೆ ರಾಜೀನಾಮೆ ನೀಡಲಿ

11:51 PM Jul 08, 2019 | Team Udayavani |

ಶಿವಮೊಗ್ಗ: ಮೈತ್ರಿ ಸರ್ಕಾರದ ವಿರುದ್ಧ ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ಅತೃಪ್ತಿ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಅತೃಪ್ತಿ ಹೆಚ್ಚಾಗುತ್ತಿರುವುದರಿಂದ ಶಾಸಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಾಜೀನಾಮೆ ನೀಡುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಸರ್ಕಾರ ಉರುಳಿದ ನಂತರ ಅಪಮಾನ ಅನುಭವಿಸಿ ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಟೀಕಿಸಿದರು.

ಮೈತ್ರಿ ಸರ್ಕಾರದ ಕೆಲ ಶಾಸಕರ ಮನಸ್ಸಿನಲ್ಲಿದ್ದ ಅತೃಪ್ತಿ ಈಗ ಸ್ಫೋಟಗೊಂಡಿದೆ. ವಿಧಾನಮಂಡಲದ ಅ ಧಿವೇಶನ ನಡೆಯುವುದಿಲ್ಲ. ಅಷ್ಟರಲ್ಲಿ ಮೈತ್ರಿ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದರು. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಆಪರೇಷನ್‌ ಕಮಲದಿಂದ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಇದರಲ್ಲಿ ಬಿಜೆಪಿ ಕೈವಾಡವಿಲ್ಲ.

ರಾಮಲಿಂಗಾರೆಡ್ಡಿ ಅವರೇ ಮೈತ್ರಿ ವಿರುದ್ಧದ ಅಸಮಾಧಾನದಿಂದ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಶಾಸಕರ ರಾಜೀನಾಮೆಯಲ್ಲಿ ಅಮಿತ್‌ ಶಾ, ನರೇಂದ್ರ ಮೋದಿ ಅವರ ಪಾತ್ರ ಇಲ್ಲ. ಬೇಕಿದ್ದರೆ ಮೈತ್ರಿ ಸರ್ಕಾರ ಉಳಿಸಿಕೊಳ್ಳಲಿ. ಮೊದಲು ಅತೃಪ್ತ ಶಾಸಕರಿಗೆ ಉತ್ತರ ನೀಡಲಿ ಎಂದು ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next