ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಸ್ತುತ ಅನರ್ಹ ರಾಗಿರುವ ಕಾರಣ ಇದೇ ರೀತಿಯ ಮಾನನಷ್ಟ ಮೊಕದ್ದಮೆ ಪ್ರಕರಣ ವೊಂದರಲ್ಲಿ ಮಹಾರಾಷ್ಟ್ರದ ಥಾಣೆ ನ್ಯಾಯಾಲಯಕ್ಕೆ ಖುದ್ದು ಹಾಜರಾತಿಯಿಂದ ಶಾಶ್ವತ ವಿನಾಯಿತಿ ಪಡೆದಿರುವುದನ್ನು ರದ್ದು ಮಾಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ರಾಹುಲ್ ತಮ್ಮ ಭಾಷಣದಲ್ಲಿ ಮಹಾತ್ಮ ಗಾಂಧಿ ಹತ್ಯೆಯಲ್ಲಿ ಆರ್‌ಎಸ್‌ಎಸ್ ಪಾತ್ರ ವಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬುವವರು 2014 ರಲ್ಲಿ ರಾಹುಲ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಸಂಸದ ಎಂಬ ಕಾರಣಕ್ಕೆ ಖುದ್ದು ಹಾಜ ರಾತಿಯಿಂದ ವಿನಾಯಿತಿ ನೀಡಲಾಗಿತ್ತು.
ಮೀನುಗಾರರ ಪ್ರತಿಭಟನೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಆಲ್ ಇಂಡಿಯಾ ಫಿಶರ್‌ವೆುನ್ ಕಾಂಗ್ರೆಸ್(ಎಐಎಫ್ಸಿ) ಸೋಮವಾರ ಹೊಸದಿಲ್ಲಿಯ ಜಂತರ್‌ಮಂತರ್‌ನಿಂದ ಸಂಸತ್‌ವರೆಗೆ ಪ್ರತಿಭಟನ ಮೆರವಣಿಗೆ ನಡೆಸಲಿದೆ.
1975ರಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಯಾಯಿತು. ಆಗ ಯಾರೂ ವಿದೇಶಿ ರಾಷ್ಟ್ರದ ಮಧ್ಯಸ್ಥಿಕೆ ಕೋರಿ ಅತ್ತು ಕರೆಯಲಿಲ್ಲ. ಪ್ರಜೆಗಳೇ ಹೋರಾಡಿ ಪ್ರಜಾಪ್ರಭುತ್ವ ಮರಳಿ ಪಡೆದರು.
-ಕಿರಣ್ ರಿಜಿಜು, ಕೇಂದ್ರ ಸಚಿವ