Advertisement

ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಾಂಗ್ರೆಸ್ ನಾಯಕರು ಸಹಕಾರ ನೀಡಲಿ: ಆರಗ ಜ್ಞಾನೇಂದ್ರ

12:26 PM Jan 08, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ನಾಯಕರು ತಮ್ಮ ಹಠ ತೊರೆದು, ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಸರಕಾರದ ಜೊತೆಗೆ ಸಹಕರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾಂಕ್ರಾಮಿಕವಾಗಿ ಉಲ್ಬಣವಾಗುತ್ತಿರುವ ಈ ಸಂದರ್ಬದಲ್ಲಿ ಮುಂಜಾಗರೂಕತಾ ಕ್ರಮವಾಗಿ ತೆಗೆದುಕೊಂಡ ನಿರ್ಭಂಧಗಳನ್ನು ಬೆಂಬಲಿಸಿ, ಸಹಕರಿಸಬೇಕು ಎಂದರು.

ಮೇಕೆದಾಟು ಯೋಜನೆ ಸಂಬಂಧ ಇರುವ ವಿವಾದ ಅತ್ಯುಚ್ಛ ನ್ಯಾಯಾಲಯದ ಅಂಗಳದಲ್ಲಿದೆ. ಕಾಂಗ್ರೆಸ್ ನವರು ಸರಕಾರ ನಡೆಸಿದವರು, ಜವಾಬ್ದಾರಿಯಿಂದ ವರ್ತಿಸಬೇಕು. ಅನಾರೋಗ್ಯ ಬಂದ ಮೇಲೆ, ಸಮಸ್ಯೆ ಎದುರಿಸುವುದಕ್ಕಿಂತ, ಬಾರದಂತೆ ತಡೆಯುವುದು ಅತ್ಯುತ್ತಮ ಪ್ರಯತ್ನ ಎಂದ ಸಚಿವರು, ‘ ಕಾಂಗ್ರೆಸ್ ಪಾದಯಾತ್ರೆ ರಾಜಕೀಯ ಪ್ರೇರಿತ’ ಎಂದರು.

ಇದನ್ನೂ ಓದಿ:ಶಿವಮೊಗ್ಗ: ವೀಕೆಂಡ್ ಕರ್ಫ್ಯೂ ಇದ್ದರೂ ಶಾಸಕರ ಒಡೆತನ ಶಾಲೆ ಮಾತ್ರ ಓಪನ್!

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ವಾರಾಂತ್ಯ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೆ ಪೊಲೀಸರು ಅತ್ಯಂತ ಸಹನೆಯಿಂದ ವರ್ತಿಸಬೇಕು. ಸಾರ್ವಜನಿಕರೂ ಸರಕಾರದ ಜತೆ ಸಹಕರಿಸಬೇಕು ಎಂದರು.

Advertisement

ಕಾನೂನನ್ನು ಉಲ್ಲಂಘಿಸಿದವರ ವಿರುಧ್ದ ಪ್ರಕೃತಿ ವಿಕೋಪ ತಡೆ ಕಾಯ್ದೆಯಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು

Advertisement

Udayavani is now on Telegram. Click here to join our channel and stay updated with the latest news.

Next