Advertisement

ಅಡುಗೆ ಸಿಬಂದಿ ಸ್ವಚ್ಛತೆಗೆ ಆದ್ಯತೆ ನೀಡಲಿ: ದೀಪಿಕಾ

01:12 PM Jan 15, 2022 | Team Udayavani |

ಭಾಲ್ಕಿ: ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರು ಸ್ವಚ್ಛತೆಗೆ ಮೊದಲಾದ್ಯತೆ ನೀಡಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್‌ ಹೇಳಿದರು.

Advertisement

ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಜಿಪಂ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಾರ್ಯಾಲಯ ಹಾಗೂ ಅಕ್ಷರ ದಾಸೋಹ ಯೋಜನೆ ತಾ.ಪಂ. ಭಾಲ್ಕಿ ವತಿಯಿಂದ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಕ್ಷರ ದಾಸೋಹ ಯೋಜನೆಯ ಮೂಲ ಉದ್ದೇಶ ಎಲ್ಲ ಮಕ್ಕಳು ಶಾಲೆಗೆ ಹಾಜರಾಗಿ ಅಕ್ಷರ ಕಲಿಯುವುದಾಗಿದೆ. ಹೀಗಾಗಿ ಬಿಸಿಯೂಟದ ಅಡುಗೆ ಸಿಬ್ಬಂದಿಯವರು ಮಕ್ಕಳಿಗೆ ಉತ್ತಮವಾದ ರುಚಿ, ರುಚಿಯಾದ ಅಡುಗೆ ಮಾಡಿ ಹಾಕಿದಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯುವುದಿಲ್ಲ. ಪ್ರಸ್ತುತ ಸಾಲಿನಲ್ಲಿ ಕೋವಿಡ್‌ ಸಾಂಕ್ರಾಮಿಕ ರೋಗ ನಮ್ಮೆಲ್ಲರನ್ನೂ ಕಾಡುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ಕೊಡುವುದರೊಂದಿಗೆ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂದು ಹೇಳಿದರು.

ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಮಾತನಾಡಿ, ಅಕ್ಷರ ದಾಸೋಹ ಯೋಜನೆಯಡಿ ಆಹಾರ ಧಾನ್ಯ ಹಂಚುವಾಗ ನಿರಂತರವಾಗಿ ಗೈರು ಹಾಜರಿದ್ದ ಮಕ್ಕಳಿಗೆ ಶಾಲೆಗೆ ಬರುವಂತೆ ಮಾಡಿ ಆಹಾರ ಧಾನ್ಯ ಹಂಚಬೇಕು ಎಂದು ಸಲಹೆ ನೀಡಿದರು.

ಅಡುಗೆ ಸಿಬ್ಬಂದಿಯವರು ತಮ್ಮ ಗೌರವ ಧನ ಹೆಚ್ಚಿಸಬೇಕು ಎನ್ನುವ ಬೇಡಿಕೆ ಇಟ್ಟರು. ನಂತರ ಆರೋಗ್ಯ ಇಲಾಖೆಯ ಡಾ| ನಂದಿನಿ ಆರ್‌ಬಿಎಸ್‌ಕೆ ಬಿಸಿಯೂಟ ತಯಾರಿಸುವಾಗ ಅನುಸರಿಸಬೇಕಾದ ಆರೋಗ್ಯದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

Advertisement

ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಕಾಂಬಳೆ ಬಿಸಿಯೂಟ ಯೋಜನೆಯ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು. ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ದತ್ತು ಕಾಟಕರ, ಉಪಾಧ್ಯಕ್ಷ ಜಯರಾಜ ದಾಬಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಅಶೋಕ ಕುಂಬಾರ, ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಜೊಳದಪಕೆ, ವೀರಶೆಟ್ಟಿ ಇಟಗೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next