ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಮಾಜದ ಒಂದು ಭಾಗವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಮಂಡಳಿಯ ವಾರ್ಷಿಕ ವರದಿ, ಬೆಂಗಳೂರು ಪರಿಸರ ಕುರಿತ ವರದಿ, ಪರಿಸರ ವಾಹಿನಿ ಪತ್ರಿಕೆ ಹಾಗೂ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ವಿಶ್ವದಲ್ಲಿ ಎರಡು ಸಾವಿರ ವರ್ಷಗಳಲ್ಲಿ ಸಂಭವಿಸಿದಷ್ಟು ಪರಿಸರ ಹಾನಿ ಕಳೆದ 20 ವರ್ಷಗಳಲ್ಲಿ ಸಂಭವಿಸಿದೆ. ಆದ್ದರಿಂದ ನಾವು ಜಾಗೃತರಾಗಿ ಪರಿಸರ ರಕ್ಷಣೆಯನ್ನು ತುರ್ತು ಆದ್ಯತೆಯಾಗಿ ಪರಿಗಣಿಸಿ ಕಾರ್ಯೋನ್ಮುಖ ರಾಗಬೇಕಾಗಿದೆ ಎಂದರು.
ಇದನ್ನೂ ಓದಿ:ನಾಲ್ಕು ಕ್ಷೇತ್ರಗಳ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಉತ್ತಮ ಅವಕಾಶ: ಡಿಕೆಶಿ
ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಶಾಂತ್ ಎ. ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.