ಅಮೀನಗಡ: ಎಲ್ಲರೂ ಕೂಡಾ ಶಿಕ್ಷಣದ ಮಹತ್ವ ಅರಿತು, ಎಲ್ಲರಿಗೂ ಕೂಡಾ ಸಮಾನ ಅವಕಾಶ ಸಿಕ್ಕಾಗ ಸಮಸಮಾಜದ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಹೇಳಿದರು.
Advertisement
ಪಟ್ಟಣದ ಸಂಗಮೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಯ್.ಟಿ.ಆಯ್ ಕಾಲೇಜು ಸಹಯೋಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಕುಟುಂಬ, ಸಮಾಜ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಉತ್ತಮವಾದ ವಾತಾವರಣ, ಸಂಸ್ಕಾರ ಕಲ್ಪಿಸಿಕೊಟ್ಟಾಗ, ಉತ್ತಮ ಪ್ರಜೆಗಳನ್ನು ಸಮಾಜಕ್ಕೆಕೊಡಬಹುದು ಎಂದರು.
ಪ್ರೋತ್ಸಾಹಿಸುವುದು ಅವರಿಗೆ ಎಲ್ಲ ರೀತಿಯ ಸಹಕಾರ ನೀಡುವುದು ತಂದೆ, ತಾಯಿಗಳ ಕರ್ತವ್ಯ. ಹಾಗಾಗಿ ತಾವು ತಮ್ಮ ಶಕ್ತಿ ಮೀರಿ ಮಕ್ಕಳಿಗೆ ಸಂಸ್ಕಾರ, ಶಿಕ್ಷಣ ನೀಡಬೇಕು. ಆಗ ಮಗು ಒಳ್ಳೆಯ ವಿದ್ಯಾವಂತ ನಾಗರಿಕ ಆಗಲು ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ ಪ್ರಭುಶಂಕರೇಶ್ವರ ಗಚ್ಚಿನಮಠದ ಪೀಠಾಧಿಪತಿ ಶಂಕರರಾಜೇಂದ್ರ ಸ್ವಾಮೀಜಿ ಅವರಿಗೆ ಪುಸ್ತಕಗಳ ಮೂಲಕ ತುಲಾಭಾರ ಸೇವೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜಿಲ್ಲಾಧಿಕಾರಿ ಕೆ.ಎಂ.
ಜಾನಕಿ, ಜಿಪಂ ಸಿಇಒ ಶಶಿಧರ ಕುರೇರ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ರವೀಂದ್ರ ಕಲಬುರ್ಗಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ವಿಶ್ವನಾಥ ವಂಶಾಕೃತಮಠ ಅವರನ್ನು ಸನ್ಮಾನಿಸಲಾಯಿತು. ಸಿಬ್ಬಂದಿಗಳ ವತಿಯಿಂದ ಪ್ರಾಚಾರ್ಯ ಆರ್.ಜಿ.ಸನ್ನಿ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
Related Articles
Advertisement