Advertisement

ಸರ್ಕಾರಿ ನೌಕರರು ಕ್ರೀಡೆಗಳಲ್ಲಿ ಸಕ್ರಿಯರಾಗಲಿ: ಶಾಸಕ

03:06 PM Feb 17, 2021 | Team Udayavani |

ಶಿಡ್ಲಘಟ್ಟ: ಸಾರ್ವಜನಿಕರ ಸೇವೆಯಲ್ಲಿ ಸದಾ ತೊಡಗಿರುವ ಸರ್ಕಾರಿ ನೌಕರರು ಯೋಗ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ಹಿರಿಯ ಶಾಸಕ ವಿ.ಮುನಿಯಪ್ಪ ಹೇಳಿದರು.

Advertisement

ನಗರದ ನೆಹರೂ ಕ್ರೀಡಾಂಗಣದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದಿಂದ ಏರ್ಪಡಿಸಿದ್ದ 2020-21 ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ತಾಪಂ ಅಧ್ಯಕ್ಷ ರಾಜಶೇಖರ್‌, ಇಒ ಚಂದ್ರ ಕಾಂತ್‌, ತಹಶೀಲ್ದಾರ್‌ ರಾಜೀವ್‌, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಸಿಡಿಪಿಒ ನಾಗವೇಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶ್ರೀನಿವಾಸ್‌, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಟಾರೆಡ್ಡಿ, ಕಾರ್ಯ ದರ್ಶಿ ಅಕ್ಕಲ್‌ರೆಡ್ಡಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಕುಂದಲಗುರ್ಕಿಮಂಜುನಾಥ್‌, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್‌ ಸದಸ್ಯ ಶಶಿಕುಮಾರ್‌, ಟಿಟಿ ನರಸಿಂಹಪ್ಪ, ನಗರಸಭಾ ಸದಸ್ಯ ಕೃಷ್ಣಮೂರ್ತಿ, ಕಾಂಗ್ರೆಸ್‌ ಯುವ ಮುಖಂಡ ಬಾಂಬೆ ನವಾಜ್‌, ಬಾಬಾ ಫಕ್ರುದ್ದೀನ್‌, ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಮಧುಸೂದನ್‌, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ಶ್ರೀನಾಥ್‌, ಸರ್ಕಾರಿ ಪ್ರೌಢ ಶಾಲೆಯ ಮಧುಸೂದನ್‌, ಮಳ್ಳೂರು ದೇವರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ಮಹಿಳೆಯರು ಹಾಗೂ ಪುರುಷರ ವಿಭಾಗಗಳಿಗೆ ವಯಸ್ಸಿನ ಆಧಾರದ ಮೇಲೆ ಪ್ರತ್ಯೇಕ ಸ್ಪರ್ಧೆ ಆಯೋ ಜಿಸಲಾಗಿತ್ತು. 100, 200, 400 ಮೀ. ಓಟ, ಷಾಟ್‌ ಪುಟ್‌, ಡಿಸ್ಕಸ್‌ ಥ್ರೋ, ಸಂಗೀತ ಸ್ಪರ್ಧೆ ಮತ್ತಿತರರ ಸ್ಪರ್ಧೆಗಳಲ್ಲಿ ನೌಕರರು ಭಾಗವಹಿಸಿ ಪ್ರತಿಭೆ ಪ್ರದರ್ಶನ ಮಾಡಿದರು. ವಿಜೇತರಿಗೆ ಪ್ರಮಾಣಪತ್ರ, ಬಹುಮಾನ ವಿತರಿಸಲಾಯಿತು

Advertisement

Udayavani is now on Telegram. Click here to join our channel and stay updated with the latest news.

Next