Advertisement

ಸರ್ಕಾರಿ ಸೌಲಭ್ಯಗಳು ಸದ್ಬಳಕೆಯಾಗಲಿ

04:34 PM Mar 12, 2022 | Team Udayavani |

ರಾಯಚೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಅಪರ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ್‌ ತಿಳಿಸಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ 75ನೇ ಸ್ವಾಂತಂತ್ರ್ಯ ಮಹೋತ್ಸವದ ಆಜಾದಿ ಕಾ ಅಮೃತ ಮಹೋತ್ಸವದ ಐಕಾನ್‌ ವೀಕ್‌ ನಿಮಿತ್ತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಆಟೋ ಜಾಗೃತಿ ಜಾಥಾವು ಒಂದು ವಾರಗಳ ಕಾಲ ಜಿಲ್ಲಾದ್ಯಂತ ಸಂಚರಿಸಿ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಾಯಿಸುವ ಕುರಿತು ಜಾಗೃತಿ ಮೂಡಿಸಲಿದೆ ಎಂದರು.

ಈ ವೇಳೆ ಮಂಡಳಿಯ ಯೋಜನೆಗಳ ಮಾಹಿತಿಯುಳ್ಳ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು. ಕಾರ್ಮಿಕ ನಿರೀಕ್ಷಕ ಎನ್‌.ವೆಂಕಟಸ್ವಾಮಿ, ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ಸೇರಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next