Advertisement
ಸೋಮವಾರ ಕುವೆಂಪು ಕನ್ನಡ ಭವನದಲ್ಲಿ ರಾಜ್ಯ ಗಿಡಮೂಲಿಕಾ ಪ್ರಾಧಿಕಾರ, ಜೀವ ವೈವಿಧ್ಯ ಮಂಡಳಿ, ಪಾಂರಪರಿಕ ವೈದ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಔಷಧಿ ಸಸ್ಯ ಕಾರ್ಯಾಗಾರದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಸರ್ಕಾರಗಳು ಹಲವು ಯೋಜನೆಗಳ ಮೂಲಕ ಜನರನ್ನು ಸೋಮಾರಿಗಳನ್ನಾಗಿ ಮಾಡಿವೆ. ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿವೆ.
Related Articles
Advertisement
ಕರ್ನಾಟಕ ಔಷಧ ಸಸ್ಯಗಳ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಸುದರ್ಶನ್ ಮಾತನಾಡಿ, ಜೀವನ ಶೈಲಿಯನ್ನು ಉತ್ತಮ ಪಡಿಸುವಲ್ಲಿ ಮಹತ್ತರ ಪಾತ್ರ ವಹಿಸುವ ಗಿಡಮೂಲಿಕೆಗಳ ಲಭ್ಯತೆ ಕಡಿಮೆ ಆಗುತ್ತಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರ ಅವನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಮುಂದಾಗಿದೆ. ನಮ್ಮ ವಿದ್ಯೆಯನ್ನು ಕಲಿತ ವಿದೇಶಿಗಳು ಅಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಭಾರತದಲ್ಲಿ ಕಡಿಮೆ ಆಗುತ್ತಿದೆ. ಪಾರಂಪರಿಕ ವೈದ್ಯಪದ್ಧತಿಯನ್ನು ಬೆಳೆಸಲು ಮುಂದಾಗಬೇಕು ಎಂದರು.
ಕರ್ನಾಟಕ ಜೀವ ವೈವಿಧ್ಯ ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತಾ ಅರೇಕಲ್ ಮಾತನಾಡಿ, ಭಾರತದಲ್ಲಿ ಬೆಳೆಯುವ ಪ್ರತಿಯೊಂದು ಗಿಡದಿಂದ ಅನುಕೂಲ ಇದೆ. ರೈತರು ಒಂದೇ ರೀತಿಯ ಬೆಳೆಗಳನ್ನು ಬೆಳೆಯುವ ಮೂಲಕ ಮಣ್ಣಿನಲ್ಲಿನ ಜೀವಾಂಶದ ಜೊತೆ ಜೀವ ವೈವಿಧ್ಯತೆಗೆ ಹಾನಿ ಆಗುತ್ತಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಲಹೆಯಂತೆ ಬೇರೆ ಬೇರೆ ಬೆಳೆಗಳನ್ನು ಬೆಳೆದು ಜೀವಾಂಶ ಉಳಿಸಬೇಕು ಎಂದು ಮನವಿ ಮಾಡಿದರು. ಹೆಬ್ಟಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪಾರಂಪರಿಕ ವೈದ್ಯ ಸಂಘದ ರಾಜ್ಯ ಅಧ್ಯಕ್ಷ ನೇರ್ಲಿಗೆ ಗುರುಸಿದ್ದಪ್ಪ, ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ| ಆರ್. ತಿಪ್ಪೇಸ್ವಾಮಿ, ಡಾ.ಜಿ. ರವಿಕುಮಾರ್, ಡಾ| ವೇಣುಗೋಪಾಲ್, ಸದಾಶಿವ, ಡಾ| ಪ್ರಭು, ಪ್ರಕಾಶ್ ಇತರರು ಇದ್ದರು.