Advertisement

ಆರೋಗ್ಯ ತಪಾಸಣಾ ಶಿಬಿರ ಮಾದರಿಯಾಗಲಿ

05:09 PM Apr 05, 2022 | Team Udayavani |

ಚಿಕ್ಕಮಗಳೂರು: ನಗರದಲ್ಲಿ ಏ.10ರಂದು ನಡೆಯುವ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ರಾಜ್ಯದಲ್ಲೇ ಮಾದರಿಯಾಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಆನಂದ್‌ ತಿಳಿಸಿದರು. ಸೋಮವಾರ ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

Advertisement

ಶಿಬಿರದಲ್ಲಿ 250ಕ್ಕೂ ಹೆಚ್ಚು ವೈದ್ಯರು, ತಜ್ಞರು ಹಾಗೂ 25 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಪಾಲ್ಗೊಳ್ಳುತ್ತಿದ್ದು, ಯಾವುದೇ ಸಮಸ್ಯೆಗಳು ಉಂಟಾಗದಂತೆ ಎಲ್ಲಾ ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳು ತಯಾರಿ ನಡೆಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸುವ ವೈದ್ಯರಿಗೆ ಹಾಗೂ ಅತಿಥಿಗಳಿಗೆ ಮಲೆನಾಡು ಹಾಗೂ ನಾಟಿ ಮಿಶ್ರಿತ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದ್ದು, ಹಿಂದಿನ ದಿನದ ರಾತ್ರಿಯ ಊಟ, ಬೆಳಗಿನ ತಿಂಡಿ, ಹಾಗೂ ಮಧ್ಯಾಹ್ನ ಭೋಜನಾ ಪಟ್ಟಿಯನ್ನು ರೂಪಿಸಲಾಗಿದೆ ಎಂದರು.

ಹಿರಿಯ ಉಪವಿಭಾಗಾಧಿಕಾರಿ ಡಾ| ಎಚ್‌.ಎಲ್‌.ನಾಗರಾಜ್‌ ಮಾತನಾಡಿ, ಚಿಕಿತ್ಸೆ ಶಿಬಿರಕ್ಕೆ 25,000ಕ್ಕೂ ಹೆಚ್ಚು ಸಾರ್ವಜನಿಕರು ಆಗಮಿಸಲಿದ್ದು, ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಆದ್ದರಿಂದ ಊಟದ ವ್ಯವಸ್ಥೆ ಕಾರ್ಯಕ್ರಮದ ಬಹು ಮುಖ್ಯ ಭಾಗವಾಗಿದ್ದು, ಸಿದ್ಧತೆಯಲ್ಲಿ ಯಾವುದೇ ಲೋಪವಾಗದಂತೆ ಕಾರ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎಐಟಿ ಮೈದಾನದಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, 30ಕ್ಕೂ ಹೆಚ್ಚು ಕೌಂಟರ್‌ಗಳು ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಭಾಗವನ್ನು ವ್ಯವಸ್ಥಿತವಾಗಿ ರೂಪಿಸಲಾಗುವುದು ಎಂದರು. ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್‌. ಕೃಷ್ಣಮೂರ್ತಿ, ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ್‌, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಕೆ.ಎಸ್‌. ರವಿಪ್ರಸಾದ್‌, ಮುಖ್ಯ ಗ್ರಂಥಾಲಯ ಅಧಿಕಾರಿ ಉಮೇಶ್‌ ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next