ಬೆಂಗಳೂರು: ರಾಜ್ಯ ಸರಕಾರ ಬೆಂಗಳೂರಿನ ಐಟಿ ಕಾರಿಡಾರ್‌ನಲ್ಲಿ ಜಲಸಂಚಾರಕ್ಕಾಗಿ ಬೋಟ್ ಫ್ಯಾಕ್ಟರಿ ಆರಂಭಿಸುವುದು ಉತ್ತಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ಜನಸ್ಪಂದನಕ್ಕಿಂತ ಮೊದಲು ಜಲಸ್ಪಂದನ ಮಾಡಲಿ ಎಂದು ವ್ಯಂಗ್ಯವಾಡಿದರು.
ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ನಮ್ಮ ಸರಕಾರಕ್ಕೆ ಬೆಂಗಳೂರಿನ ಬೆಲೆ ತಿಳಿದಿಲ್ಲ. ದೇಶಕ್ಕೆ ಶೇ.30ರಷ್ಟು ಆದಾಯ ಇಲ್ಲಿಂದಲೇ ಹೋಗುತ್ತದೆ. ಬಿಜೆಪಿ ಸರಕಾರ ಹೆಮ್ಮೆಯ ಈ ನಗರದ ಮರ್ಯಾದೆ ಹಾಳು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯದು ಜನೋತ್ಸವ ಅಲ್ಲ ಜಲೋತ್ಸವ. ಇಡೀ ಬೆಂಗಳೂರು ನೀರಿನಲ್ಲಿ ಮುಳುಗಿದೆ. ಇಂತಹ ಸಂದರ್ಭದಲ್ಲಿ ಉತ್ಸವ ಬೇಕಾ? ಮೂರು ವರ್ಷಗಳಿಂದ ಅಧಿಕಾರದಲ್ಲಿದ್ದರೂ ಏನೂ ಮಾಡದೆ ಈಗ ಹಿಂದಿನ ಸರಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಇವರು ಮಾಡಿದ್ದಾದರೂ ಏನು?–
ಎಂ.ಬಿ.ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ