Advertisement

“ಪತ್ರಕರ್ತರಲ್ಲಿ  ಸಾಮಾಜಿಕ ಚಿಂತನೆ ಇರಲಿ’

07:10 AM Jul 24, 2017 | Team Udayavani |

ಬ್ರಹ್ಮಾವರ: ಸಮಾಜ, ಕೋರ್ಟ್‌, ಅಸೆಂಬ್ಲಿಗಳು ಮಾಧ್ಯಮದವರನ್ನು ರಕ್ಷಿಸುವಾಗ, ಜನಸಾಮಾನ್ಯರ ಹಕ್ಕನ್ನು ರಕ್ಷಿಸುವ ಹೊಣೆ ಮಾಧ್ಯಮಗಳದ್ದು. ಸಮಾಜದ ಬಗ್ಗೆ ಚಿಂತನೆ ಮಾಧ್ಯಮದವರಿಗೆ ಇರಬೇಕು ಎಂದು ಲೋಕಾಯುಕ್ತ ವಿಶ್ವನಾಥ್‌ ಶೆಟ್ಟಿ ಹೇಳಿದರು.

Advertisement

ಬ್ರಹ್ಮಾವರ ಬಂಟರ ಭವನದಲ್ಲಿ ರವಿವಾರ ನಡೆದ ಹಿರಿಯ ಪತ್ರಕರ್ತ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಬ್ರಹ್ಮಾವರ ಪ್ರಸ್‌ ಕ್ಲಬ್‌ ಕೊಡಮಾಡುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇರುವ ಮೂರು ಅಂಗಗಳ ಜತೆಗೆ ಮಾಧ್ಯಮ ಕ್ಷೇತ್ರವೂ ಸಮಾನವಾಗಿ ಬೆಳೆದಿದೆ. ಪತ್ರಿಕೆ
ಒಳ್ಳೆಯ ವಿಚಾರಗಳನ್ನು ಪ್ರಕಟಿಸಿದಲ್ಲಿ ಸಮಾಜದಲ್ಲಿ ಸ್ಥಾನಮಾನ, ಗೌರವ ಸಿಗುತ್ತಿದೆ. ಕೆಟ್ಟದ್ದನ್ನು ಬರೆದಲ್ಲಿ ಸಮಾಜದ ಜನತೆಯೇ ಶಿಕ್ಷೆ ನೀಡುವುದನ್ನು ನಾವು ನೋಡುತ್ತಾ ಇದ್ದೇವೆ. ಮಾಧ್ಯಮದವರ ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿ ಎಲ್ಲರದ್ದಾಗಬೇಕು ಎಂದ ಅವರು ಒಳ್ಳೆಯ ಲೇಖನದೊಂದಿಗೆ ಜನಮನ ಗೆದ್ದ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಕೊಡುಗೆ ಮಾಧ್ಯಮ ಕ್ಷೇತ್ರಕ್ಕೆ ಅಪಾರ ಎಂದು ಹೇಳಿದರು.

ರವಿ ಬೆಳಗೆರೆಗೆ ಪ್ರಶಸ್ತಿ ಸಮಾರಂಭದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಅವರ ಪರವಾಗಿ ಹಾಯ್‌ ಬೆಂಗಳೂರು ಆಡಳಿತ ಮಂಡಳಿಯ ಆಡಳಿತಾಧಿಕಾರಿ ಉಮೇಶ್‌ ಹೆಗ್ಡೆ ಅವರು ಸ್ವೀಕರಿಸಿದರು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿಯೂ ಜವಾಬ್ದಾರಿ ಇದೆ. ಆತ್ಮಸಾಕ್ಷಿ ಶುದ್ಧವಾಗಿದಲ್ಲಿ ಯಾವ ಕ್ಷೇತ್ರದಲ್ಲಿಯೂ ಭಯವಿಲ್ಲ ಎಂದು ಹೇಳಿದರು.

Advertisement

ಬ್ರಹ್ಮಾವರ ಪ್ರಸ್‌ ಕ್ಲಬ್‌ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್‌ ಸದಸ್ಯ
ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿಗಳಾದ ಆನಂದ ಸಿ. ಕುಂದರ್‌, ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಸಮಾಜ
ಸೇವಕ ನ್ಯಾಯವಾದಿ ಸುಧೀರ್‌ ಕುಮಾರ್‌ ಮುರೊಳ್ಳಿ ಉಪಸ್ಥಿತರಿದ್ದರು. ವಸಂತ ಗಿಳಿಯಾರ್‌ ಪ್ರಸ್ತಾವನೆಗೈದರು. ಹರೀಶ್‌ ಕಿರಣ್‌ ತುಂಗ ವಂದಿಸಿದರು. ಚಂದ್ರಶೇಖರ್‌ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next