ಯಾದಗಿರಿ: ಮತದಾನ ಪವಿತ್ರ ಕಾರ್ಯವಾಗಿದ್ದು ಮುಂದಿನ ದಿನಗಳಲ್ಲಿ ಮತದಾನ ಕಡ್ಡಾಯವಾಗೊಳಿಸುವ ನಿಟ್ಟಿನಲ್ಲಿ ಕಾನೂನು ಜಾರಿ ತರಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಶ್ರೀಧರ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ
ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಮತದಾನ ಶೇಕಡಾವಾರು ಪ್ರಮಾಣ ಬಹಳ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ ಎಂದರು.
ಜಿಲ್ಲಾ ಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ| ರಾಗಪ್ರಿಯ ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾ ಧಿಕಾರಿ ಕೃಷ್ಣಮೂರ್ತಿ ದೇಸಾಯಿ ಪ್ರತಿಜ್ಞಾ ವಿ ಧಿ ಭೋದಿಸಿದರು. 18 ವರ್ಷ ತುಂಬಿದ ಹೊಸ ಮತದಾರರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಯಿತು.
ರಾಷ್ಟ್ರೀಯ ಮತದಾರರ ದಿನ ಅಂಗವಾಗಿ ಯಾದಗಿರಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾದ್ಯಂತ ಆಯೋಜಿಸಿದ್ದ ಪ್ರೌಢಶಾಲೆ, ಪದವಿ ಪೂರ್ವ, ಪದವಿ/
ಸ್ನಾತಕೋತ್ತರ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಬಹುಮಾನ
ವಿತರಿಸಲಾಯಿತು.
ಸ್ಪೀಪ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವ ಶಾಲಾ/ ಕಾಲೇಜುಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ನಾಮದೇವ ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾ ಧೀಶ ಪ್ರಕಾಶ ಅರ್ಜುನ ಬನಸೋಡೆ, ಹೆಚ್ಚುವರಿ ಸಿವಿಲ್ ನ್ಯಾಯಾಧಿಧೀಶೆ ಆಸ್ರಿàನಾ, ಜಿಪಂ ಸಿಇಒ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿ ಕಾರಿ ಪ್ರಕಾಶ ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಬಿಲ್ಲುಗಾರಿಕೆ ಸಾಧನೆ ಮಾಡಿದ ಬಾಲಕಿ ಬಸಮ್ಮ ಇದ್ದರು.