Advertisement
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “2013ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಆರ್ ಪಕ್ಷದಿಂದ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಅವರನ್ನು ನಾನು ಕೈ ಹಿಡಿದು ಗೆಲ್ಲಿಸಿದೆ. ಆದರೆ, ತಿಪ್ಪೇಸ್ವಾಮಿ ಇದೀಗ ತಾನು ಯಾರ ಸಹಾಯದಿಂದಲೂ ಗೆದ್ದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಅವರು ಈ ಬಾರಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ನನ್ನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಅಥವಾ ಬೇರೆಯವರಿಗೆ ಬೆಂಬಲ ನೀಡಿ ಗೆದ್ದು ತೋರಿಸಲಿ. ಇದು ತಿಪ್ಪೇಸ್ವಾಮಿಯವರಿಗೆ ನಾನು ಒಡ್ಡುತ್ತಿರುವ ಬಹಿರಂಗ ಸವಾಲು. ಮೊಳಕಾಲ್ಮೂರು ಕ್ಷೇತ್ರದಿಂದ ನಾನು ಕೇವಲ ನಾಮಪತ್ರ ಸಲ್ಲಿಸಿ, ಎರಡೂ¾ರು ದಿನ ರಾಜ್ಯ ಪ್ರವಾಸ ಮಾಡಿ, ನಂತರ ಕ್ಷೇತ್ರದಲ್ಲೇ ಪ್ರಚಾರ ಮಾಡಿ ಗೆದ್ದು ತೋರಿಸುತ್ತೇನೆ’ ಎಂದು ಸವಾಲು ಹಾಕಿದರು.
ನಾಯಕನಹಟ್ಟಿಯಲ್ಲಿ ಶುಕ್ರವಾರ ಹಲ್ಲೆ ಘಟನೆ ನಡೆಯುತ್ತಿದ್ದಂತೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಫೋಟೊವೊಂದನ್ನು ಅಪ್‌ಲೋಡ್ ಮಾಡಿ ಬಿ.ಶ್ರೀರಾಮುಲು ಅವರ ಮೇಲೆ ಹಲ್ಲೆಯಾಗಿದೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ನಾಲ್ಕು ವರ್ಷಗಳ ಹಿಂದೆ ಪ್ರತಿಭಟನೆ ನಡೆಸುತ್ತಿದ್ದಾಗ ಶ್ರೀರಾಮುಲು ಅವರ ಅಂಗಿ ಹರಿದಿತ್ತು. ಆ ಫೋಟೋವನ್ನು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದೆ.