Advertisement

ಹಾಲು ಉತ್ಪಾದಕರ ಸಂಘಗಳು ಜನರ ಆರ್ಥಿಕತೆಗೆ ಸಹಕಾರಿಯಾಗಲಿ :ಸುಚರಿತ ಶೆಟ್ಟಿ

03:53 PM Jun 08, 2022 | Team Udayavani |

ಶಿರ್ವ: ಗ್ರಾಮೀಣ ಭಾಗದಲ್ಲಿ ಸಾಮುದಾಯಿಕ ಬದುಕಿನೊಂದಿಗೆ ಆರ್ಥಿಕ ಸ್ವಾವಲಂಬನೆಯಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ರೈತರ ಆರ್ಥಿಕತೆಗೆ ಸಹಕಾರಿಯಾಗಲಿ. ದ.ಕ.ಹಾಲು ಒಕ್ಕೂಟದ ವಿವಿಧ ಸವಲತ್ತುಗಳನ್ನು ಸದ್ವಿನಿಯೋಗ ಪಡಿಸಿಕೊಂಡು ಸಂಘಗಳು ಸಮೃದ್ಧ ಹಾಲನ್ನು ಒಕ್ಕೂಟಕ್ಕೆ ನೀಡುವಂತಾಗಲಿ ಎಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು.

Advertisement

ಅವರು ಬೆಳ್ಳೆ ಗೀತಾ ಮಂದಿರದಲ್ಲಿ ಜೂ. 8 ರಂದು ಬೆಳ್ಳೆ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 27 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆಯಿಂದ ನಿವೃತ್ತರಾಗುತ್ತಿರುವ ರವೀಂದ್ರ ಹಲ್ದೋಣ್‌ಕರ್‌ ಅವರನ್ನು ಸಮ್ಮಾನಿಸಿ ಮಾತನಾಡಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಹಲ್ದೋಣ್‌ಕರ್‌ ಅವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು. ದೀಪಾ ಪೂಜಾರಿ ಸಮ್ಮಾನ ಪತ್ರ ವಾಚಿಸಿದರು. ಸಮ್ಮಾನ ಸ್ವೀಕರಿಸಿದ ರವೀಂದ್ರ ಹಲ್ದೋಣ್‌ಕರ್‌ ತನ್ನ ಅಧಿಕಾರವಧಿಯಲ್ಲಿ ಸಹಕರಿಸಿದ ಸಂಘದ ಅಧ್ಯಕ್ಷರುಗಳು,ಆಡಳಿತ ಮಂಡಳಿಯ ಸದಸ್ಯರು ಹಾಗೂ ಹಾಲು ಉತ್ಪಾದಕರಿಗೆ ಕೃತಜ್ಞತೆ ಸಲ್ಲಿಸಿದರು. ಬೆಳ್ಳೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಾ| ಎಚ್‌.ಬಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ರವಿರಾಜ ಹೆಗ್ಡೆ ಕೊಡವೂರು, ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಡಿ.ಅಶೋಕ್‌, ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಸುಧಾಕರ ಪೂಜಾರಿ, ದ.ಕ. ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ, ಉಪವ್ಯವಸ್ಥಾಪಕ ಡಾ|ಅನಿಲ್‌ ಕುಮಾರ್‌ ಶೆಟ್ಟಿ, ಬೆಳ್ಳೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಶಿವಾಜಿ ಎಸ್‌. ಸುವರ್ಣ ಮಾತನಾಡಿದರು. ಬೆಳ್ಳೆ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ವಿಷ್ಣುಮೂರ್ತಿ ಭಟ್‌ ವೇದಿಕೆಯಲ್ಲಿದ್ದರು.

ಸಮ್ಮಾನ :

Advertisement

ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಸಹಕಾರ ರತ್ನ ಪ್ರಶಸ್ತಿ ಪುರಸðತ ರವಿರಾಜ ಹೆಗ್ಡೆ ಕೊಡವೂರು, ಆರ್ಯಭಟ ಪ್ರಶಸ್ತಿ ವಿಜೇತ ಕಾಪು ದಿವಾಕರ ಶೆಟ್ಟಿ, ದ.ಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಅಶೋಕ್‌, ಬೆಳ್ಳೆಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಾ| ಎಚ್‌.ಬಿ. ಶೆಟ್ಟಿ, ಉಪಾಧ್ಯಕ್ಷ ವಿಷ್ಣುಮೂರ್ತಿ ಭಟ್‌, ವಿಸ್ತರಣಾಧಿಕಾರಿ ಯಶವಂತ್‌ ಹಾಗೂ ಹಾಲು ಉತ್ಪಾದಕಿ ಬಿಬ್ರಿ ಅವರನ್ನು ಬೆಳ್ಳೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು,ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಪದಾಧಿಕಾರಿಗಳು, ಬೆಳ್ಳೆ ಗ್ರಾ.ಪಂ. ಸದಸ್ಯರು, ಹಾಲು ಉತ್ಪಾದಕರ ಸಂಘದ ಸದಸ್ಯರು, ಸಿಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಾರ್ಲ್ಸ್‌ ಕ್ವಾಡ್ರಸ್‌ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ದೇವದಾಸ್‌ ಹೆಬ್ಟಾರ್‌ ಕಾರ್ಯಕ್ರಮ ನಿರೂಪಿಸಿ,ರಂಜಿತ್‌ ಆರ್‌.ನಾಯಕ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next