Advertisement

“ಕಮಿಷನ್‌ಗೆ ಬಲಿಯಾದ ಕುಟುಂಬಕ್ಕೆ ಮೋದಿ ಸಾಂತ್ವನ ಹೇಳಲಿ’: ಸುರ್ಜೇವಾಲ

11:10 PM Mar 04, 2023 | Team Udayavani |

ಬಳ್ಳಾರಿ: ನಾನು ತಿನ್ನಲ್ಲ, ತಿನ್ನುವವರನ್ನು ಬಿಡಲ್ಲ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದಾಗ ಶೇ. 40 ಕಮಿಷನ್‌ಗೆ ಬಲಿಯಾಗಿದ್ದ ಗುತ್ತಿಗೆದಾರರ ಮನೆಗೆ ಭೇಟಿ ನೀಡಿ, ಆ ಕುಟುಂಬದವರಿಗೆ ಸಾಂತ್ವನ ಹೇಳಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಟೀಕಿಸಿದರು.

Advertisement

ನಗರ ಹೊರವಲಯದ ಗುರು ಫಂಕ್ಷನ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಶನಿವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಗ್ಯಾರೆಂಟಿಗಳ ಉದ್ಘಾ ಟನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಮಿಷನ್‌ ದಂಧೆ ವಿಚಾರವನ್ನು ಪ್ರಧಾನಿ ಮೋದಿ ಅವರಿಗೆ 50 ಸಾವಿರ ಜನ ಇರುವ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪತ್ರ ಬರೆದು ತಿಳಿಸಿದ್ದಾರೆ ಎಂದರು.

ಪತ್ರ ಬರೆದರೂ ಸ್ಪಂದಿಸಿಲ್ಲ
ಖಾಸಗಿ ಶಿಕ್ಷಣ ಸಂಸ್ಥೆಯವರೂ ಸಹ ಪತ್ರ ಬರೆದಿದ್ದಾರೆ. ಅಲ್ಲದೆ, ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ್‌, ಬೆಂಗಳೂರಿನ ಪ್ರಸಾದ್‌ ಕಮಿಷನ್‌ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮ ಪಕ್ಷದ ನಾಯಕರು ಅವರಿಗೆ ಸಾಂತ್ವನ ಹೇಳಿದ್ದಾರೆ. ಆದರೆ, ರಾಜ್ಯದ ಮುಖ್ಯಮಂತ್ರಿ ಈ ಬಗ್ಗೆ ಏನೂ ಮಾತನಾಡಲ್ಲ. ಕುಟುಂಬ ಸದಸ್ಯರನ್ನೂ ಭೇಟಿ ಆಗಿಲ್ಲ. ಅಷ್ಟು ಮಾತ್ರವಲ್ಲ ಘಟನೆ ನಂತರ ಹಲವು ಬಾರಿ ಪ್ರಧಾನಿ ಮೋದಿ ರಾಜ್ಯಕ್ಕೆ ಬಂದರೂ ಸಾಂತ್ವನ ಹೇಳುವ ಗೋಜಿಗೆ ಹೋಗಿಲ್ಲ. ಮುಂದಿನ ಬಾರಿ ರಾಜ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಾದರೂ ಈ ಕೆಲಸ ಮಾಡಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next