ಹುಬ್ಬಳ್ಳಿ: ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿಕೆ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅದು ಸರಿಯೋ, ತಪ್ಪೋ ಎಂದು ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರನ್ನು ಕೊಲೆ ಮಾಡಿಸಿದ್ದಾರೆ. ಅಂತಹ ಸಂಸ್ಕೃತಿ ಉಳ್ಳವರ ಕಡೆಯಿಂದ ಈ ರೀತಿ ಹೇಳಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ, ರೈತರ, ಬಡವರ, ದಲಿತರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಬರುವ ಚುನಾವಣೆಯಲ್ಲಿ ಟಿಪ್ಪು ಹಾಗೂ ಸಾವರ್ಕರ್ ಎಂದು ಬರೆದುಕೊಳ್ಳಲಿ. ಇದನ್ನು ಜನರು ತೀರ್ಮಾನ ಮಾಡಲಿ. ಜನರಿಗೆ ಪ್ರಚೋದನೆ ನೀಡುವ ಮೂಲಕ ಇದಕ್ಕೆಲ್ಲಾ ಪ್ರೋತ್ಸಾಹ ನೀಡುತ್ತಿರುವುದು ಖಂಡನೀಯ.
ಇದನ್ನೂ ಓದಿ:ವೆಸ್ಟ್ ಇಂಡೀಸ್ ಏಕದಿನ ಮತ್ತು ಟಿ20 ತಂಡಕ್ಕೆ ನೂತನ ನಾಯಕರ ನೇಮಕ
ರಾಜ್ಯದ ಪ್ರಜೆಗಳ ಜೀವ ಹಾಗೂ ಆಸ್ತಿ ರಕ್ಷಣೆ ಮಾಡಬೇಕಾದವರು ಯಾರು? ಸರ್ಕಾರ ನನ್ನನ್ನು ಮುಗಿಸಿ ಎಂಬುದು ಎಷ್ಟರ ಮಟ್ಟಿಗೆ ಸರಿ. ಆದರಿಂದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದರು.
ಸಚಿವ ಡಾ. ಅಶ್ವತ್ಥನಾರಾಯಣ ಅವರನ್ನು ರಾಜ್ಯಪಾಲರು ಸಚಿವ ಸಂಪುಟದಿಂದ ವಜಾ ಮಾಡಬೇಕು. ಸಿದ್ದರಾಮಯ್ಯನನ್ನು ಮುಗಿಸಿರಿ ಅಂದರೆ ಎನರ್ಥ? ಇದನ್ನೂ ಎಲ್ಲರೂ ಖಂಡಿಸಬೇಕು ಎಂದರು.