Advertisement

ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗಲಿ: ನಟ ಝೈದ್ ಖಾನ್ ರಿಂದ ಸಿಎಂ ಗೆ ಮನವಿ

02:50 PM Oct 01, 2022 | Team Udayavani |

ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ನಟ ಝೈದ್ ಖಾನ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ನಟ ಝೈದ್ ಖಾನ್, ”ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ ಪೀಳಿಗೆಯ ಹೃದಯದೊಳಗೆ ಇಳಿಯಬೇಕು. ಹಾಗಾಗಿ ಮುಖ್ಯಮಂತ್ರಿಗಳು ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯೂ ಮೊಳಗುವಂತೆ ಮಾಡಬೇಕು ಎಂಬುದಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಚಲನಚಿತ್ರ ಮಂಡಳಿಯವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ : ಮೈಸೂರು ದಸರಾ ಪ್ರಯುಕ್ತ ವಿಂಟೇಜ್ ಕಾರ್ ಶೋಗೆ ಚಾಲನೆ

ಇದೇ ವೇಳೆ ತಮ್ಮ ಪ್ಯಾನ್ ಇಂಡಿಯಾ ಚಿತ್ರವಾದ ‘ಬನಾರಸ್’ ಅನ್ನು ಬಾಯ್ಕಾಟ್ ಮಾಡುವ ಕೂಗು ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ”ನಾನು ಒಬ್ಬ ಕಲಾವಿದ. ಪ್ರಾಮಾಣಿಕವಾಗಿ ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದೇನೆ. ಇದರಲ್ಲಿ ನನ್ನದೇನು ತಪ್ಪಿದೆ? ಸೋಲು ಮತ್ತು ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳುವ ಸ್ವಭಾವ ನನ್ನದು. ನಾನೂ ಈ ನೆಲದ ಕಲಾವಿದ. ಜನ ಚಿತ್ರ ನೋಡಿ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ” ಎಂದು ಪ್ರತಿಕ್ರಿಯಿಸಿದರು.

ನವೆಂಬರ್ 4 ರಂದು ”ಬನಾರಸ್” ಚಿತ್ರ ಬಿಡುಗಡೆಯಾಗುತ್ತಿದ್ದು,ಚಿತ್ರ ವೀಕ್ಷಣೆಗೆ ಸಿಎಂ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಿದ್ದೇನೆ ಎಂದು ನಟ ಝೈದ್ ಖಾನ್ ಹೇಳಿದ್ದಾರೆ.

Advertisement

ಈ ವೇಳೆ ವಿವಿಧ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಝೈದ್ ಖಾನ್ ಅವರೊಂದಿಗಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next