Advertisement

ಪ್ರಧಾನಿ ಮಣಿಪುರದತ್ತ ಗಮನಹರಿಸಲಿ: ಡ್ಯಾನಿಶ್‌ ಅಲಿ

07:49 PM May 05, 2023 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಮುದಾಯ ಸಂಘರ್ಷದಿಂದ ಹೊತ್ತಿ ಉರಿಯುತ್ತಿರುವ ಮಣಿಪುರದತ್ತ ಗಮನಹರಿಸಬೇಕು ಎಂದು ಬಿಎಸ್‌ಪಿ ಸಂಸದ ಡ್ಯಾನಿಶ್‌ ಅಲಿ ಆಗ್ರಹಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಂಘರ್ಷದಿಂದಾಗಿ ಮಣಿಪುರದ 8 ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದ್ದು, ಇಂಟರ್‌ನೆಟ್‌ ಸಹಿತ ಎಲ್ಲ ಸಂಪರ್ಕ ವ್ಯವಸ್ಥೆಗಳು ಸ್ಥಗಿತಗೊಂಡಿವೆ. ಮುಖ್ಯಮಂತ್ರಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಪರಿಹಾರ ಹುಡುಕಲು ರಾಜ್ಯದ ಶಾಸಕರು ದಿಲ್ಲಿಗೆ ತೆರಳುತ್ತಿದ್ದಾರೆ. ಆದರೆ ಪ್ರಧಾನಿ ಸಹಿತ ಕೇಂದ್ರದ ಸಚಿವರು ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದಾರೆ. ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರು ದಯವಿಟ್ಟು ಅಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next