Advertisement

ಶುದ್ಧ ಕುಡಿವ ನೀರಿನ ಘಟಕ ಸದ್ಬಳಕೆಯಾಗಲಿ: ದಫೇದಾರ

04:38 PM Jun 27, 2020 | Suhan S |

ಬೆಳಗಾವಿ: ಗೋಕಾಕ ಮತ್ತು ಮೂಡಲಗಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ 130 ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ಸಾರ್ವಜನಿಕರು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗೋಕಾಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಐ.ಎಂ. ದಫೇದಾರ ಹೇಳಿದರು.

Advertisement

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದ ಸಮುದಾಯ ರೇಡಿಯೋ ಕೇಂದ್ರದಲ್ಲಿ ಆಯೋಜಿಸಿದ್ದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಏಜೆನ್ಸಿಗಳ ಮೂಲಕ ನೀರಿನ ಘಟಕಗಳ ಮೇಲುಸ್ತುವಾರಿ ನೋಡುತ್ತಿರುವುದರಿಂದ ಇಲ್ಲಿಯವರೆಗೆ ಅಂತಹ ಸಮಸ್ಯೆಗಳಾಗಿಲ್ಲ. ಇನ್ನೂ 4 ಘಟಕಗಳ ನಿರ್ವಹಣೆ ಟೆಂಡರ್‌ ಪ್ರಕ್ರಿಯೆ ಶೀಘ್ರ ಮುಗಿಸಿ ಗುಣಮಟ್ಟದ ನೀರು ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಿರಿಯ ಅಭಿಯಂತ ನೀಲಮ್ಮ ಎಸ್‌. ಲಮಾಣಿ ಮಾತನಾಡಿ, ಸಾರ್ವಜನಿಕರು ನೀರಿನ ಘಟಕಗಳ ಕ್ವಾಯಿನ್‌ ಬಾಕ್ಸ್‌ಗಳಿಗೆ ವೈಸರ್‌ ಹಾಕಿ ಹಾಳು ಮಾಡುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು. ಆರ್‌.ಎಸ್‌. ಮಾಳ್ಳೋದೆ ಹಾಗೂ ಕಿರಣ ಚೌಗಲಾ ಉಪಸ್ಥಿತರಿದ್ದರು. ವಿವಿಧ ಗ್ರಾಮಗಳಿಂದ 15 ಜನರು ಕರೆ ಮಾಡಿ ಮಾಹಿತಿ ಪಡೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next