Advertisement

ರಾಹುಲ್‌ ಮತ್ತೆ ಎಐಸಿಸಿ ಅಧ್ಯಕ್ಷರಾಗಲಿ: ಮಲ್ಲಿಕಾರ್ಜುನ ಖರ್ಗೆ

11:16 PM Sep 23, 2022 | Team Udayavani |

ಕಲಬುರಗಿ: ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿರುವ ರಾಹುಲ್‌ ಗಾಂಧಿ  ಅವರೇ ಮತ್ತೂಮ್ಮೆ ಎಐಸಿಸಿ ಅಧ್ಯಕ್ಷರಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಕಷ್ಟು ಅನುಭವ ಜತೆಗೆ ಕ್ರಿಯಾಶೀಲ ಯುವ ನಾಯಕರಾಗಿರುವ ಅವರಿಗೆ ಪಕ್ಷವನ್ನು ಮುನ್ನಡೆಸುವ ಎಲ್ಲ ಸಾಮರ್ಥ್ಯವೂ ಅವರಿಗಿದೆ. ರಾಹುಲ್‌ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು ಎನ್ನುವ ನಿಟ್ಟಿನಲ್ಲಿ ಕಳೆದ ಸೆ.16ರಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಗಿದೆ.

ಆದರೂ ಅವರು ತಮ್ಮ ಕುಟುಂಬದವರು ಅಧ್ಯಕ್ಷರಾಗಬಾರದು ಎನ್ನುತ್ತಿದ್ದಾರೆ. ಹಾಗಿದ್ದರೂ ರಾಹುಲ್‌ ಮನಸ್ಸು ಮಾಡಬೇಕು ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next