Advertisement

ರಾಹುಲ್‌ ಗಾಂಧಿಯೇ ಕಾಂಗ್ರೆಸ್‌ ಅಧ್ಯಕ್ಷರಾಗಲಿ: ಡಿ.ಕೆ. ಶಿವಕುಮಾರ್‌

11:04 PM Sep 27, 2022 | Team Udayavani |

ಚಿತ್ರದುರ್ಗ: ದೇಶ ಹಾಗೂ ಪಕ್ಷದಲ್ಲಿ ಏಕತೆ ಕಾಪಾಡಲು ಗಾಂಧಿ ಕುಟುಂಬದಿಂದ ಮಾತ್ರ ಸಾಧ್ಯ. ಹಾಗಾಗಿ ರಾಹುಲ್‌ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಹಾಗೂ ದೇಶದ ಉಳಿವಿಗಾಗಿ ರಾಹುಲ್‌ ಗಾಂಧಿ  ಎಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಬೇಕು.

ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಪಕ್ಷದ ನಾಯಕತ್ವ ಒಪ್ಪಿಕೊಳ್ಳಬೇಕು ಎನ್ನುವುದು ಪಕ್ಷದ ಕಾರ್ಯಕರ್ತರ ಬೇಡಿಕೆ. ಅವರು ಅಧ್ಯಕ್ಷ ಸ್ಥಾನದ ಹೊಣೆಗಾರಿಕೆ ತಿರಸ್ಕರಿಸಬಾರದು. ಅವರು ಪರಿಶ್ರಮದಿಂದ ಕೆಲಸ ಮಾಡುತ್ತಾರೆ. ದೇಶವನ್ನು ರಕ್ಷಣೆ ಮಾಡುವ ಸಂಪೂರ್ಣ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next