Advertisement

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

05:45 PM Oct 17, 2024 | Team Udayavani |

ಕುಷ್ಟಗಿ: ಅತ್ಯಂತ ಹಿಂದುಳಿದ ವರ್ಗದವರು, ಈ ರಾಜ್ಯವನ್ನು ಆಳಬೇಕಿದೆ. ಇದರಲ್ಲಿ ಎರಡು ಮಾತಿಲ್ಲ ಅದರಲ್ಲೂ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿಯಾಗುವುದು ನನಗೂ ಆಸೆ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಹೇಳಿದರು.

Advertisement

ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಆಯೋಜಿಸಿದ್ದ ಮಹರ್ಷಿ ವಾಲ್ಮಿಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೀಘ್ರವೇ ಜಾರಕಿಹೊಳಿ ಸಿಎಂ ಆಗಲಿ ಎಂದರು.

ರಾಜ್ಯದಲ್ಲಿ ಮೂಡಾ ಪ್ರಕರಣದ ಹಿನ್ನೆಲೆಯಲ್ಲಿ ಮುಂದಿನ ಸಿಎಂ, ದಲಿತ ಚರ್ಚೆಯಲ್ಲಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ ಅವರು, ಮುಂದಿನ ಸಿಎಂ ಹಿಂದುಳಿದ ವರ್ಗದ ಜಾರಕಿಹೊಳಿ ಅವರ ಹೆಸರು ಪ್ರಸ್ತಾಪಿಸಿರುವುದು ಚರ್ಚೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next