Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದಮನಿತ ಮಹಿಳೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಜೀವನಮಟ್ಟ ಸುಧಾರಿಸಲು ರಚಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಕೋಶದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿ ಅಕ್ಷತಾ, ಜಿಲ್ಲೆಯಲ್ಲಿ 1100 ಜನ ಲೈಂಗಿಕ ಅಲ್ಪಸಂಖ್ಯಾತರು ಇದ್ದಾರೆ. ಬಹಳಷ್ಟು ಇಲಾಖಾ ಅಧಿಕಾರಿಗಳಿಗೆ ದಮನಿತರ ಹಾಗೂ ಲೈಂಗಿಕ ಅಲ್ಪಸಂಖ್ಯಾತ ವರ್ಗದ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ಕುರಿತಂತೆ ಅಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವುದು ಅಗತ್ಯವಾಗಿದೆ. ಅಧಿಕಾರಿಗಳು, ಲೈಂಗಿಕ ಅಲ್ಪಸಂಖ್ಯಾತರು ಹಾಗೂ ಲೈಂಗಿಕ ಕಾರ್ಯಕರ್ತರಿಗೆ ಲಿಂಗತ್ವ ಸೂಕ್ಷ ್ಮತೆಯ ಅರಿವಿನ ಕಾರ್ಯಕ್ರಮವನ್ನು ಆಯೋಜಿಸಲು ಸಭೆಯಲ್ಲಿ ಮನವಿ ಮಾಡಿಕೊಂಡರು.
ದಮನಿತ ಮಹಿಳೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತ ವರ್ಗಕ್ಕೆ ಮನೆಗಳ ನಿರ್ಮಾಣ, ಈ ವರ್ಗದ ವಿದ್ಯಾವಂತರಿಗೆ ಉದ್ಯೋಗ ಮೇಳ ಆಯೋಜಿಸಿ ಉದ್ಯೋಗ ಅವಕಾಶ ಕಲ್ಪಿಸುವುದು, ಕೌಶಲ್ಯಾಭಿವೃದ್ಧಿಗೆ ತರಬೇತಿಗಳನ್ನು ಆಯೋಜಿಸುವುದು, ಸಣ್ಣ ಸಣ್ಣ ಉದ್ಯಮಗಳನ್ನು ನಡೆಸಲು ಆಸಕ್ತರಿಗೆ ನೆರವು ಒದಗಿಸುವುದು, ಶಾಲೆಯನ್ನು ತೊರೆದವರಿಗೆ ಶಿಕ್ಷಣ ಮುಂದುವರಿಸಲು ನೆರವು ಒದಗಿಸುವುದು ಹಾಗೂ ನೇರವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಬಾಹ್ಯವಾಗಿ ಹಾಜರಾಗಲು ಅಗತ್ಯ ನೆರವು ನೀಡುವುದು, ಪಿಂಚಣಿ ಯೋಜನೆ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಯ ಯೋಜನೆಗಳಡಿ ಈ ವರ್ಗಗಳಿಗೆ ಸೌಲಭ್ಯಗಳನ್ನು ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಮನ್ವಯತೆಯಿಂದ ಇಲಾಖಾ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ. ಶ್ರೀವಿದ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ, ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಾಗೂ ಇತರ ಇಲಾಖೆ ಅಧಿಕಾರಿಗಳು ಹಾಗೂ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.