ಬಳ್ಳಾರಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಸಚಿವ ಎಂ.ದಿವಾಕರ ಬಾಬು ಆಹ್ವಾನಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಿವಾಕರ ಬಾಬು ಅವರು, ರೆಡ್ಡಿ ಬ್ರದರ್ಸ್ ವಿರುದ್ಧ ತೊಡೆತಟ್ಟಿದ್ದ ಸಿದ್ದರಾಮಯ್ಯ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು.ಭ್ರಷ್ಟಾಚಾರ ಹಾಗೂ ದರ್ಪದ ರಾಜಕಾರಣ ಖಂಡಿಸಿ ಪಾದಯಾತ್ರೆ ನಡೆಸಿದ್ದರು.ಬಳಿಕ ರಾಜ್ಯದ ಮುಖ್ಯಮಂತ್ರಿಯೂ ಆಗಿ ಐದು ವರ್ಷ ಅಧಿಕಾರ ನಡೆಸಿದರು.ಈಗಲೂ ಸಹ ಸಿದ್ದರಾಮಯ್ಯ ಬಳ್ಳಾರಿಯಿಂದ ಸ್ಪರ್ಧಿಸಿ ಮುಖ್ಯಮಂತ್ರಿ ಆಗಲಿ ಎಂದರು.
ನಾನು ಈಗಾಗಲೇ ಈ ಸಂಬಂಧ ಕಾಂಗ್ರೆಸ್ ಮುಖಂಡರ ಜೊತೆಗೆ ಮಾತನಾಡಿದ್ದೇನೆ.ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಜೊತೆ ಮಾತಾನಾಡಿದ್ದೇನೆ ಎಂದರು.
ಬಿಜೆಪಿ ಸರ್ಕಾರದಲ್ಲಿ ಬಳ್ಳಾರಿ ಅಭಿವೃದ್ಧಿ ಕಂಡಿಲ್ಲ.ಇರೋ ಕಟ್ಟಡ ಹಾಗೂ ಟವರ್ ಒಡೆದು ಹಾಕೋದು ಬಿಜೆಪಿ ಸರ್ಕಾರದ ಸಾಧನೆ. ಅವುಗಳನ್ನೇ ಮತ್ತೆ ಹೊದದಾಗಿ ಕಟ್ಟೋದೆ ಅವರ ಕೆಲಸ.ಸಿದ್ದರಾಮಯ್ಯ ಬಳ್ಳಾರಿಯಿಂದ ಚುನಾವಣೆ ನಿಂತು ಗೆದ್ದರೆ ನಮ್ಮ ಜಿಲ್ಲೆ ಅಭಿವೃದ್ಧಿ ಆಗುತ್ತದೆ. ಈ ಹಿಂದೆ ಸಹ ಮಾಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಳ್ಳಾರಿಯಿಂದ ಚುನಾವಣೆಗೆ ಸ್ಪರ್ಧಿಸಿ ಜಯ ಸಾಧಿಸಿದ್ದರು. ಹೀಗಾಗಿ ಸಂಡೂರು, ಬಳ್ಳಾರಿ ಸೇರಿ ಇಡೀ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಾಗಿವೆ.ಈಗಲೂ ನಾವು ಸಿದ್ದರಾಮಯ್ಯ ಅವರ ಗೆಲುವಿಗೆ ಶ್ರಮಿಸಲು ಸಿದ್ಧರಿದ್ದೇವೆ ಎಂದರು.
Related Articles
ಪ್ರತಿಕ್ರಿಯೆಗೆ ನಕಾರ
ಮಾಜಿ ಸಚಿವ ಜನಾರ್ದನ ರೆಡ್ಡಿ ಬಗ್ಗೆ ಪ್ರಶ್ನಿಸಿದಾಗ, ಅವರ ವಿರುದ್ಧ ಪ್ರಕರಣಗಳು ನ್ಯಾಯಾಲಯದ ಹಂತದಲ್ಲಿವೆ.ಹೀಗಾಗಿ ಅವುಗಳ ಬಗ್ಗೆ ಮಾತನಾಡಲ್ಲ ಎಂದರು.
ಕಾಂಗ್ರೆಸ್ ನಲ್ಲಿ ಬಣಗಳು ಹೆಚ್ಚಿವೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ನಾನು ಎಲ್ಲ ಪ್ರಮುಖ ಕಾಂಗ್ರೆಸ್ ಮುಖಂಡರ ಜೊತೆ ಮಾತನಾಡಿದ್ದೇನೆ.ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ನನ್ನ ಹೆಸರು ಬರೋದಿಲ್ಲ ಎಂದರು.
ದಿವಾಕರ ಬಾಬು ಅವರು ಬಳ್ಳಾರಿ ನಗರ ಟಿಕೆಟ್ ಕೈತಪ್ಪುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದರೇ? ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೆಸರು ತೇಲಿ ಬಿಟ್ಟಾರೇ ಎನ್ನುವ ಬಗ್ಗೆಯೂ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.