ಒಲವು ತೋರಿ ಸಂಶೋಧನೆಯಲ್ಲಿ ತೊಡಗಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.
Advertisement
ಪಟ್ಟಣದ ಡಾ| ಬಿ.ಆರ್. ಅಂಬೇಡ್ಕರ್ ಉದ್ಯಾನವನ ಹತ್ತಿರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.
ಸದ್ಬಳಕೆ ಮಾಡಿಕೊಂಡು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಆಧುನಿಕ ತಂತ್ರಜ್ಞಾನದಲ್ಲಿ ಪಠ್ಯಪುಸ್ತಕಗಳಲ್ಲಿ ಹೊಸ ಹೊಸ ಆವಿಷ್ಕಾರಗಳು
ಬರುತ್ತಿದ್ದು ವಿದ್ಯಾರ್ಥಿಗಳು ಇವುಗಳನ್ನು ಮನದಟ್ಟು ಮಾಡಿಕೊಂಡು ಅಧ್ಯಯನ ಮಾಡಬೇಕು ಎಂದರು. ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು ಶಿಕ್ಷಣದೊಂದಿಗೆ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಕಳಕಳಿ ಹೊಂದಿ ಸಮಾಜಮುಖೀಯಾಗಿ ಕೆಲಸ ನಿರ್ವಹಿಸಬೇಕು. ಯುವ ಜನಾಂಗ ರಾಷ್ಟ್ರದ ಸಂಪತ್ತು. ದುಶ್ಚಟಗಳಿಗೆ ದಾಸರಾಗದೇ ಸದೃಢ ಆರೋಗ್ಯ ಕಾಪಾಡಿಕೊಂಡು ರಾಷ್ಟ್ರಪ್ರೇಮ ಮೈಗೊಡಿಸಿಕೊಳ್ಳಬೇಕು. ಸರ್ಕಾರಿ ಕಾಲೇಜಿನಲ್ಲಿ ಸುಸಜ್ಜಿತ ಪ್ರಯೋಗಾಲಯ ಸ್ಥಾಪಿಸಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಂಡು ನಾಡಿಗೆ ಕೀರ್ತಿ ತರಬೇಕು. ಕಾಲೇಜು ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
Related Articles
Advertisement
ಈ ವೇಳೆ ಉಪ ವಿಭಾಗಾಧಿಕಾರಿ ಡಾ| ಶಶಿಧರ ಬಗಲಿ, ತಹಶೀಲ್ದಾರ್ ಬಸವರಾಜ ನಾಗರಾಳ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷಅಶೋಕ ವಾಲಿ, ಸದಸ್ಯರಾದ ಶ್ರೀಶೈಲ ಮೊರಬದ, ವೀರಣ್ಣ ಜವಳಿ, ಈರಣ್ಣ ಬೆಟಗೇರಿ, ಅಂಬಿಕಾ ಕೊಟಬಾಗಿ, ಆರ್.ಕೆ. ಪಾಟೀಲ ಇದ್ದರು.
ಉಪನ್ಯಾಸಕ ಬಸವರಾಜ ಪುರಾಣಿಕಮಠ ಮಾತನಾಡಿದರು. ಪ್ರಾಚಾರ್ಯ ಪುಂಡಲೀಕ ಕಾಂಬಳೆ ಸ್ವಾಗತಿಸಿದರು. ಬಸವರಾಜ ಅಡಿಕೆ ನಿರೂಪಿಸಿದರು. ಮುಕ್ತಾ ಹುಡೇದ ಪ್ರಾರ್ಥಿಸಿದರು. ಉಪನ್ಯಾಸಕ ಬಿ.ಎಂ. ಕೊಳವಿ ವಂದಿಸಿದರು.